ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಹತ್ಯೆ: ಶಂಕಿತ ಐವರು ಪೊಲೀಸ್ ವಶಕ್ಕೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಳ್ಳಾರೆಯ ಬಿಜೆಪಿ ಯುವ ನಾಯಕ ಪ್ರವೀಣ್ ನಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರನ್ನು ವಶಕ್ಕೆ ತೆಗೆದುಕೊಂಡಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ‌ ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಪೊಲೀಸ್ ಮೂಲಗಳು ಯಾವುದೇ ಖಚಿತ ಮಾಹಿತಿ ನೀಡಿಲ್ಲ.

ಮಂಗಳವಾರ ರಾತ್ರಿ ನಡೆದ ಈ ಘಟನೆಗೆ ಸಂಬಂಧಿಸಿ ಕೆಯ್ಯೂರು ಮಾಡಾವು ಸಂತೋಷ್ ನಗರದ ನಿವಾಸಿ ನೀಡಿದ ದೂರಿನಂತೆ ಮೂರು ಜನ ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ 63/2022 ರಂತೆ 302 ಜೊತೆ 34 ಐಪಿಸಿ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಶಂಕಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ದ್ವಿಚಕ್ರ ವಾಹನದಲ್ಲಿ ಬಂದ ಹಂತಕರು ಪ್ರವೀಣ್ ನೆಟ್ಟಾರು ಅವರನ್ನು ಮಂಗಳವಾರ ರಾತ್ರಿ ಬರ್ಬರವಾಗಿ ಹತ್ಯೆಗೈದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!