ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಮನೆಯವರಿಗೆ ತನ್ನ ಕಚೇರಿಯಲ್ಲಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶವಾದ ಜನಸ್ಪಂದನ ಕಾರ್ಯಕ್ರಮದಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಸ್ಮರಿಸಿಕೊಂಡ ಅವರು, ನೆಟ್ಟಾರು ಪತ್ನಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಉದ್ಯೋಗ ನೀಡುವುದಾಗಿ ಪ್ರಕಟಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಪ್ರವೀಣ್ ಜೊತೆಗೆ ಇತ್ತೀಚೆಗಷ್ಟೇ ನಿಧನರಾದ ಉಮೇಶ್ ಕತ್ತಿ ಅವರನ್ನು ಸ್ಮರಣೆ ಮಾಡಲಾಯಿತು.
ಭಾರತ ಮಾತೆ ಮತ್ತು ಬಿಜೆಪಿ ಸ್ಥಾಪಕರ ಭಾವಚಿತ್ರಗಳಿಗೂ ಮುಂದೆ ಕತ್ತಿ ಮತ್ತು ನೆಟ್ಟಾರು ಭಾವಚಿತ್ರಗಳನ್ನು ಇರಿಸಿ ಗೌರವ ಸಲ್ಲಿಕೆ ಮಾಡಲಾಯಿತು.
ಬಿಜೆಪಿಗೆ ಕಾರ್ಯಕರ್ತರೇ ಜೀವಾಳ …
ಮತಾಂಧರಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಮನೆಯವರಿಗೆ ತನ್ನ ಕಛೇರಿಯಲ್ಲಿ ಉದ್ಯೋಗ ನೀಡುವುದಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರು ಘೋಷಿಸಿದ್ದಾರೆ.#JanaSpandana pic.twitter.com/dc2qcHIP1u
— BJP Karnataka (@BJP4Karnataka) September 10, 2022