ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: 10 ಮಂದಿ ಪೊಲೀಸರ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಹತ್ಯೆ ಪ್ರಕರಣ ಸಂಬಂಧಿಸಿ ಇವರೆಗೂ 10 ಮಂದಿ ಶಂಕಿತರನ್ನ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.
ಸಿಎಂ ಜೊತೆಗಿನ ಸಭೆಯ ನಂತ್ರ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರುಪ್ರಕರಣದ ಕುರಿತು ಸಿಎಂ ಜೊತೆ ಮಾತನಾಡಿದ್ದೇವೆ.ಪ್ರವೀಣ್‌ ಸೂದ್‌ ಬೆಳವಣಿಗೆ ಬಗ್ಗೆ ಮಾಹಿತಿ ನೀಡಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದೇವೆ.
ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 10 ಮಂದಿ ವಶಕ್ಕೆ ಪಡೆಯಲಾಗಿದೆ. ಪೊಲೀಸರು ತುಂಬಾನೇ ಚುರುಕಾಗಿ ತನಿಖೆ ನಡೆಸುತ್ತಿದ್ದಾರೆ. ಇನ್ನು ನಮ್ಮ ಪೊಲೀಸರು ಕೇರಳಕ್ಕೆ ತೆರಳಿ ಹುಡುಕಾಟ ನಡೆಸುತ್ತಿದ್ದಾರೆ. ಅಗತ್ಯವಿದ್ರೆ, ಪ್ರಕರಣವನ್ನ ಎನ್‌ಐಎಗೆ ಒಪ್ಪಿಸಲು ಸಿದ್ದರಿದ್ದೇವೆ’ ಎಂದರು.
ವೀಣ್‌ ಹತ್ಯೆ ನಂತ್ರ ಬೆಳ್ಳಾರೆ ಉದ್ವಿಗ್ನಗೊಂಡಿದ್ದು, 144 ಸೆಕ್ಷನ್‌ ಜಾರಿ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!