Thursday, August 18, 2022

Latest Posts

BIG NEWS | ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ಮತ್ತೋರ್ವ ವಶಕ್ಕೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆ ನಿವಾಸಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿ ಮತ್ತೋರ್ವನನ್ನು ಪೊಲೀಸರು ಕೇರಳದಲ್ಲಿ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೇರಳದತ್ತ ತನಿಖೆ ವಿಸ್ತರಿಸಿರುವ ಪೊಲೀಸರು ಕಣ್ಣೂರಿನ ತಲಶೇರಿಯಲ್ಲಿ ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಾಥಮಿಕ ಮಾಹಿತಿಗಳ ಪ್ರಕಾರ ವಶಕ್ಕೆ ಪಡೆದವನನ್ನು ಅಬಿದ್ ಎಂದು ಹೆಸರಿಸಲಾಗಿದೆ. ಆದರೆ ಇದನ್ನು ಪೊಲೀಸ್ ಇಲಾಖೆ ಖಚಿತಗೊಳಿಸಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!