Wednesday, September 28, 2022

Latest Posts

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಐವರು ಪ್ರಮುಖ ಆರೋಪಿಗಳು ಎನ್ ಐಎ ಕಸ್ಟಡಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸುಳ್ಯದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಐವರು ಪ್ರಮುಖ ಆರೋಪಿಗಳನ್ನು ಆರು ದಿನಗಳ ಕಾಲ ಕಸ್ಟಡಿಗೆ ಪಡೆದಿದೆ.
ರಾಜ್ಯ ಪೊಲೀಸರು ಕಸ್ಟಡಿ ತನಿಖೆಯನ್ನು ಆಗಸ್ಟ್ 16 ರಂದು ಪೂರ್ಣಗೊಳಿಸಿದ ನಂತರ, ಆಗಸ್ಟ್ 23ರವರೆಗೂ ಆರೋಪಿಗಳನ್ನು ತನ್ನ ವಶಕ್ಕೆ ನೀಡುವಂತೆ ಎನ್ ಐಎ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಇದೀಗ ಪ್ರಕರಣದ ಆರೋಪಿಗಳಾದ ನೌಪಾಲ್ (28) ಸೈನುಲ್ ಅಬಿದ್ (22), ಮೊಹಮ್ಮದ್ ಸೈಯದ್ (32), ಅಬ್ದುಲ್ ಬಶೀರ್ (29) ಮತ್ತು ರಿಯಾಜ್ (27) ಅವರನ್ನು ಎನ್ ಐಎ ಕಸ್ಟಡಿಗೆ ಪಡೆದುಕೊಂಡಿದೆ.
ಜುಲೈ 26 ರಂದು ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಚಿಕನ್ ಸ್ಟಾಲ್ ಮುಚ್ಚಿ ಮನೆಗೆ ಮರಳಲು ಮುಂದಾದಾಗ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!