ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಂದು ಕಾರ್ಯಕರ್ತ ಸುಳ್ಯದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಎನ್ಐಎ ಯಶಸ್ವಿಯಾಗಿದೆ.
ಆರೋಪಿ ಅತೀಕ್ ಅಹಮ್ಮದ್ ಎಂಬಾತನನ್ನು ಬಂಧಿಸಿರುವುದಾಗಿ ಎನ್ಐಎ ತಿಳಿಸಿದೆ.
https://x.com/NIA_India/status/1881710985452597504
ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ 2022 ರ ಜುಲೈನಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸದಸ್ಯರು ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 21 ನೇ ಆರೋಪಿ ಅತೀಕ್ ಅಹ್ಮದ್ ಆಗಿದ್ದಾನೆ. ಈತ ಹತ್ಯೆ ಪ್ರಕರಣದ ಮುಖ್ಯ ಸಂಚುಕೋರ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ್ದ ಎನ್ನಲಾಗಿತ್ತು.
ಅಲ್ಲದೇ ಹತ್ಯೆ ಬಳಿಕ ಮುಸ್ತಫಾ ಫೈಚಾರ್ ಚೆನ್ನೈಗೆ ಪರಾರಿಯಾಗಲು ಅತೀಕ್ ಅಹಮದ್ ನೆರವಾಗಿದ್ದ ಎಂದಿದ್ದರು. ಆದರೆ ಮೇ 2024ರಲ್ಲಿ ಮುಸ್ತಫಾ ಪೈಚಾರ್‌ನನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಇದೀಗ ಈ ಬೆನ್ನಲ್ಲೇ ಅತೀಕ್ ಅಹಮದ್ ಅನ್ನು ಬಂಧಿಸಿದ್ದಾರೆ. ಇನ್ನು ಅತೀಕ್ ಅಹಮದ್ ಪಿಎಫ್‌ಐ ಸಂಘಟನೆಯ ಸದಸ್ಯನಾಗಿದ್ದ ಅಂತಾನೂ ಹೇಳಲಾಗಿದೆ.
2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವಮೋರ್ಚಾ ಸದಸ್ಯನ ಹತ್ಯೆ ನಡೆದಿತ್ತು. ಆಗಸ್ಟ್ 4, 2022 ರಂದು ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದ್ದ ರಾಷ್ಟ್ರೀಯ ತನಿಖಾ ದಳ ಇಲ್ಲಿಯವರಗೂ 20 ಮಂದಿಯನ್ನು ಬಂಧಿಸಿದೆ. ತಲೆ ಮರೆಸಿಕೊಂಡಿರುವ ಮೂವರು ಸೇರಿದಂತೆ 23 ಆರೋಪಿಗಳನ್ನು ಜಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ.