ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ವಿರುದ್ದ ಪೂರಕ ಚಾರ್ಜ್‌ಶೀಟ್ ಸಲ್ಲಿಸಿದ ಎನ್‌ಐಎ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳ ವಿರುದ್ದ ರಾಷ್ಟ್ರೀಯ ತನಿಖಾ ದಳ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಪೂರಕ ಚಾರ್ಜ್‌ಶೀಟ್ ಸಲ್ಲಿಸಿದೆ.

ಪ್ರಮುಖ ಆರೋಪಿ ಎಂ.ಎಚ್ ತುಫೈಲ್ ಹಾಗೂ ಮೊಹಮ್ಮದ್ ಜಬೀರ್ ವಿರುದ್ಧ ಚಾರ್ಚ್‌ಶೀಟ್ ಸಲ್ಲಿಸಿದ್ದಾರೆ.

ಕೊಡಗು ಮೂಲದವನಾದ ಎಂ.ಎಚ್.ತುಫೈಲ್, ಪಿಎಫ್​ಐ ಸರ್ವೀಸ್ ಟೀಂನ ಸಕ್ರಿಯ ಸದಸ್ಯನಾಗಿದ್ದು, ಮಾಸ್ಟರ್ ಟ್ರೈನರ್ ಆಗಿ ಗುರುತಿಸಿಕೊಂಡಿದ್ದ. ದಕ್ಷಿಣ ಕನ್ನಡದಲ್ಲಿರುವ ಫ್ರೀಡಂ ಕಮ್ಯುನಿಟಿ ಹಾಲ್ನಲ್ಲಿ ಪಿಎಫ್​ಐ ಸದಸ್ಯರಿಗೆ ಶಸ್ತ್ರಾಸ್ತ್ರ ಸೇರಿ ಸುಧಾರಿತ ತರಬೇತಿ ನೀಡುತ್ತಿದ್ದ.ಎನ್‌ಐಎ ತನಿಖೆಯ ಪ್ರಕಾರ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳಿಗೆ ಮೈಸೂರು, ಕೊಡಗು ಹಾಗೂ ತಮಿಳುನಾಡಿನ ಈರೋಡ್‌ನಲ್ಲಿ ತುಫೈಲ್ ಆಶ್ರಯ ಕಲ್ಪಿಸಿಕೊಟ್ಟಿದ್ದನು.

ಮೊಹಮ್ಮದ್ ಜಬೀರ್ ದಕ್ಷಿಣ ಕನ್ನಡ ಜಿಲ್ಲೆಯ ಪಿಎಫ್​ಐ ಜಿಲ್ಲಾಧ್ಯಕ್ಷನಾಗಿದ್ದು, ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಿ ನಡೆದಿದ್ದ ಸಭೆಗಳಲ್ಲಿ ಭಾಗಿಯಾಗಿದ್ದ. ಮತ್ತು ಮಸೂದ್ ಹತ್ಯೆಗೆ ಪ್ರತಿಕಾರ ತೀರಿಸಿಕೊಳ್ಳಲಾಗುವುದು ಎಂದು ಪ್ರಚೋದನಕಾರಿ ಭಾಷಣಗಳನ್ನ ಮಾಡಿದ್ದ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಮೊದಲ ಚಾರ್ಜ್‌ಶೀಟ್ ಏನಿತ್ತು?
ತನಿಖಾ ಕಾಲದಲ್ಲಿ ಪಿಎಐ ಸಂಘಟನೆಯು ಹಿಂದುಗಳಲ್ಲಿ ಭಯವನ್ನುಂಟು ಮಾಡುವ ಮತ್ತು 2047ರ ವೇಳೆಗೆ ಭಾರತದಲ್ಲಿ ಇಸ್ಲಾಂ ಆಡಳಿತ ಜಾರಿಗೆ ತರುವ ಉದ್ದೇಶ ಹೊಂದಿದ್ದು ಅದಕ್ಕಾಗಿಯೇ ತನ್ನದೇ ಆದ ಸರ್ವಿಸ್ ಟೀಂ / ಕಿಲ್ಲರ್ಸ್ ಸ್ಕ್ವಾಡ್ ಹೊಂದಿರುವುದು ಕಂಡು ಬಂದಿದೆ.ಸರ್ವಿಸ್ ಟೀಂನ ಸದಸ್ಯರು ಶಸ್ತ್ರಾಸ್ತ್ರ ತರಬೇತಿ ಹೊಂದಿದ್ದು ಪಿಎಪ್‌ಐನ ಹಿರಿಯ ನಾಯಕರುಗಳ ಆಜ್ಞೆಯಂತೆ ಹತ್ಯೆ, ಹಲ್ಲೆಗಳನ್ನ ನಡೆಸುತ್ತಿದ್ದರು. ಅದರಂತೆ ನಾಲ್ವರನ್ನು ಗುರುತಿಸಲಾಗಿತ್ತು. ನಾಲ್ವರಲ್ಲಿ ಬಿಜೆಪಿಯ ಯುವ ಮೋರ್ಚಾದ ಜಿಲ್ಲಾ ಕಮಿಟಿ ಸದಸ್ಯ ಪ್ರವೀಣ್ ನೆಟ್ಟಾರುನನ್ನು 2022ರ ಜುಲೈ 26 ರಂದು ಸಾರ್ವಜನಿಕರ ಕಣ್ಣೆದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯ್ಯಲಾಯಿತು ಎಂದು ಎನ್‌ಐಎ ಜನವರಿ 20, 2023ರಂದು ಸಲ್ಲಿಸಿದ್ದ ತನ್ನ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿತ್ತು.

2022 ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಎಂಬುವರ ಮೇಲೆ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!