ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಎನ್‌ಐಎ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಆರೋಪಿಗಳ ವಿರುದ್ದ ಬೆಂಗಳೂರಿನ ಎನ್‌ಐಎ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

240 ಸಾಕ್ಷಿಗಳ ಹೇಳಿಕೆ ಇರುವ 1500 ಪುಟಗಳ ಚಾರ್ಜ್ ಶೀಟ್ ಅನ್ನು ಎನ್‌ಐಎ ಅಧಿಕಾರಿಗಳು ಸಲ್ಲಿಸಿದ್ದಾರೆ. ಇದುವರೆಗೆ 14 ಆರೋಪಿಗಳ ಬಂಧಿಸಲಾಗಿದೆ. 6 ಮಂದಿ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ತಲೆಮರೆಸಿಕೊಂಡಿರುವ 6 ಜನ ಆರೋಪಿಗಳ ಪತ್ತೆಗಾಗಿ ಒಟ್ಟು ಬಹುಮಾನವನ್ನು ಎನ್‌ಐಎ ಘೋಷಿಸಿದೆ.

ಇಂದು ಮತ್ತೆ ಬಂಟ್ವಾಳ ತಾಲೂಕಿನ ಕೊಡಾಜೆಯ ಷರೀಫ್ ಮತ್ತು ನೆಕ್ಕಿಲಾಡಿಯ ಅಗ್ನಾಡಿ ಹೌಸ್​ನ ಅಬೂಬಕರ್ ಮಗ ಮಸೂದ್ ಕೆ.ಎ ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್​ಐಎ ಅಧಿಕಾರಿಗಳು ಘೋಷಣೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!