October 18, 2026
Sunday, October 18, 2026
spot_img

ಪ್ರವೀಣ್ ನೆಟ್ಟಾರು ಕೊ*ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ 2022ರ ಜುಲೈ 26 ರಂದು ನಡೆದಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ ತಲೆಮರಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ರಾಷ್ಟ್ರೀಯ ತನಿಖಾ ದಳ ಭಾನುವಾರ ಯಶಸ್ವಿಯಾಗಿದೆ.

ಬಂಧಿತ ಆರೋಪಿಗಳು ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ನೌಶಾದ್ (32) ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆ ಚೌಡ್ಲಿ ಕಾನ್ವೆಂಟ್ ರಸ್ತೆ ನಿವಾಸಿ ಅಬ್ದುಲ್ ನಾಸಿರ್ (41) ಎಂದು ತಿಳಿದುಬಂದಿದ್ದು ಆರೋಪಿಗಳನ್ನು NIA ಅಧಿಕಾರಿಗಳು ಜು. 11 ರಂದು ಬೆಂಗಳೂರು ಹಾಗೂ ಕೊಚ್ಚಿಯಲ್ಲಿ ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:

ಆರೋಪಿ ನೌಶಾದ್ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಆರೋಪಿಗಳು ಪರಾರಿಯಾಗಲು ಕಾರು ಚಾಲಕನಾಗಿ ನೆರವು ನೀಡಿದ್ದಾನೆ ಎನ್ನಲಾಗಿದ್ದು ಈ ಪ್ರಕರಣದಲ್ಲಿ ಈವರೆಗೆ ಒಟ್ಟು 28 ಆರೋಪಿಗಳ ಪೈಕಿ 25 ಮಂದಿಯನ್ನು ಬಂಧಿಸಲಾಗಿದೆ. ಇನ್ನೂ ಮೂವರು ತಲೆಮರೆಸಿಕೊಂಡಿದ್ದಾರೆ.

ತಲೆಮರೆಸಿಕೊಂಡಿದ್ದ ನೌಶಾದ್ ಹಾಗೂ ಅಬ್ದುಲ್ ನಾಸಿರ್ ಪತ್ತೆಗೆ ಸಹಕರಿಸುವವರಿಗೆ 2 ಲಕ್ಷ ಬಹುಮಾನ ಘೋಷಿಸಿ ಎನ್ ಐ ಎ ವ್ಯಾಪಕ ಶೋಧ ಕಾರ್ಯ ನಡೆಸುತ್ತಿತ್ತು. ಇದೀಗ ಇಬ್ಬರ ಬಂಧನದೊಂದಿಗೆ ಬಂಧಿತರ ಸಂಖ್ಯೆ ಹೆಚ್ಚಳವಾಗಿದ್ದು ಉಳಿದ ಆರೋಪಿಗಳ ಬಂಧನಕ್ಕಾಗಿ ಎನ್ ಐ ಎ ಕಾರ್ಯಾಚರಣೆ ಮುಂದುವರಿಸಿದೆ ಎಂದು ಪೋಲಿಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

Must Read