ಪ್ರವೀಣ್ ನೆಟ್ಟಾರು ಹತ್ಯೆ: ಹಂತಕರ ಬಂಧನಕ್ಕೆ ಐದು ವಿಶೇಷ ತಂಡ ರಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರಾವಳಿಯಲ್ಲಿ ತಲ್ಲಣ ಮೂಡಿಸಿರುವ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಗೆ ಐದು ವಿಶೇಷ ತಂಡ ರಚಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಶ್, ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಮೂವರ ತಂಡ ಈ ಕೃತ್ಯ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನಲೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ತನಿಖೆಗೆ ಐದು ವಿಶೇಷ ಪೋಲೀಸ್ ತಂಡವನ್ನು ರಚಿಸಲಾಗಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ಕೈಗೆತ್ತಿಕೊಳ್ಳಲಾಗಿದೆ, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ವಿಚಾರಣೆ ಕೂಡಾ ಮಾಡಲಾಗುತ್ತಿದೆ. ಶೀಘ್ರವೇ ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!