ಪ್ರವೀಣ್​​ ನೆಟ್ಟಾರು ಹತ್ಯೆ ಕೇವಲ ಕೊಲೆ ಮಾತ್ರ ಅಲ್ಲ, ದೇಶದ್ರೋಹದ ಕೃತ್ಯ: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿರುವ ದಿ. ಪ್ರವೀಣ್ ನೆಟ್ಟಾರು ಅವರ ಮನೆಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಬಳಿಕ ಮಾಧ್ಯಮದ ಜತೆ ಮಾತಾಡಿದ ಸಿಎಂ ಬೊಮ್ಮಾಯಿ, ಪ್ರವೀಣ್​​ ನೆಟ್ಟಾರು ಹತ್ಯೆ ಅತ್ಯಂತ ಖಂಡನೀಯ.ಇದು ಕೊಲೆ ಮಾತ್ರ ಅಲ್ಲ, ಇದೊಂದು ದೇಶದ್ರೋಹದ ಕೆಲಸವಾಗಿದೆ. ಪೂರ್ವ ನಿಯೋಜಿತ ಕೃತ್ಯ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಕೇರಳದ ಗಡಿಯಲ್ಲೇ ಹತ್ಯೆ ನಡೆದಿರೋ ಕಾರಣ ಇದು ವ್ಯವಸ್ಥಿತ ಕೊಲೆ ಎನ್ನಬಹುದು. ಹಲವಾರು ವರ್ಷಗಳಿಂದ ಹೀಗೆ ಕರಾವಳಿ ಪ್ರದೇಶದಲ್ಲಿ ಕೊಲೆಗಳು ನಡೆಯುತ್ತಿರೋ ಪರಿಣಾಮ ನಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.
ರಾಜ್ಯ ಸರ್ಕಾರದಿಂದ 25 ಲಕ್ಷ, ಬಿಜೆಪಿಯಿಂದ 25 ಲಕ್ಷ ಚೆಕ್​ ನೀಡಿದ್ದೇವೆ. ನಮ್ಮ ಸರ್ಕಾರ ಮತ್ತು ಪಕ್ಷದಿಂದ ಪ್ರವೀಣ್​ ಮನೆಯವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ನಾವು ಪ್ರವೀಣ್​ ಹತ್ಯೆ ಕೇಸನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸೋಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಹತ್ಯೆ ಹಿಂದೆ ಯಾವುದೇ ಸಂಘಟನೆ ಇದ್ದರೂ ಬಂಧಿಸುತ್ತೇವೆ ಎಂದು ಭರವಸೆ ನೀಡಿದರು.
ಈ ಸಂದರ್ಭ ಗೃಹ ಸಚಿವ ಆರಗ ಜ್ಞಾನೇಂದ್ರ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್,ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ,ಮೀನುಗಾರಿಕೆ ಬಂದರು ಮತ್ತು‌ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಸಂಸದ ನಳೀನ್ ಕುಮಾರ್ ಕಟೀಲ್, ನಾಯಕರಾದ
ಸಿ.ಟಿ ರವಿ, ಶಾಸಕರಾದ ಸಂಜೀವ್ ಮಠಂದೂರು, ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜನ ಪ್ರತಿನಿಧಿಗಳು ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!