ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ರೂಪಾಯಿ ನೀಡುತ್ತೇವೆ ಎಂದು ಸಚಿವ ಎಸ್. ಅಂಗಾರ ತಿಳಿಸಿದ್ದಾರೆ.
ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿದ ವೇಳೆ ಪೋಷಕರು ಮತ್ತು ಪತ್ನಿಗೆ ಸಾಂತ್ವಾನ ಹೇಳಿದ ಸಚಿವ ಅಂಗಾರ ಪರಿಹಾರದ ಭರವಸೆ ನೀಡಿದ್ದಾರೆ.
ಕೊಲೆ ಆರೋಪಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಎಂದು ಮೃತರ ಪತ್ನಿ ಒತ್ತಾಯಿಸಿದ್ದಾರೆ.