Monday, August 15, 2022

Latest Posts

ಹೊಸ ಮನೆ ಕಟ್ಟಿಸಲು ಸಿದ್ಧಮಾಡಿದ್ದ ಜಾಗದಲ್ಲೇ ಪ್ರವೀಣ್ ನೆಟ್ಟಾರು ಪಂಚಭೂತಗಳಲ್ಲಿ ಲೀನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬರ್ಬರವಾಗಿ ಹತ್ಯೆಗೀಡಾದ ಪ್ರವೀಣ್ ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಿನ ಹೊಸ ಮನೆ ಕಟ್ಟಿಸಬೇಕು ಎಂಬುದಾಗಿ ಖರೀದಿಸಲಾಗಿದ್ದ ಜಾಗದಲ್ಲಿಯೇ ನೆರವೇರಿಸಲಾಗಿದೆ.

ಪ್ರವೀಣ್ ನೆಟ್ಟಾರು ಅವರನ್ನು, ಅವರು ಗ್ರಾಮದಲ್ಲಿ ಹೊಸ ಮನೆ ಕಟ್ಟಿಸಬೇಕು ಎಂಬುದಾಗಿ ಜಾಗವನ್ನು ಸಮತಟ್ಟು ಮಾಡಿಸಿದ್ದ ಜಾಗದಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಅವರ ಕುಟುಂಬಸ್ಥರ ಆಕ್ರಂದನದ ನಡುವೆ ಪಂಚಭೂತಗಳಲ್ಲಿ ಪ್ರವೀಣ್ ನೆಟ್ಟಾರು ಲೀನರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಟ್ಟಾರು ಗ್ರಾಮದ ಪ್ರವೀಣ್ ಹತ್ಯೆಗೈಯಲಾಗಿತ್ತು. ಈ ಸಂಬಂಧ ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಅಲ್ಲದೇ ಲಾಠಿ ಚಾರ್ಜ್ ಕೂಡ ನಡೆಸಲಾಗಿದೆ. ಹೀಗಾಗಿ ಬೆಳ್ಳಾರೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss