ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ಪೊಲೀಸ್ ಮಾಜಿ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಕೇಂದ್ರೀಯ ತನಿಖಾ ದಳದ ನೂತನ ನಿರ್ದೇಶಕರಾಗಿ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.
1986ರ ಬ್ಯಾಚ್, ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿರುವ ಪ್ರವೀಣ್ ಸೂದ್ ಅವರು ಸಿಬಿಐನ 34ನೇ ನಿರ್ದೇಶಕರಾಗಿದ್ದಾರೆ. ಸುಬೋಧ್ ಕುಮಾರ್ ಜೈಸ್ವಾಲ್ ಅವರ ಅಧಿಕಾರದ ಅವಧಿ ಮುಗಿದ ಹಿನ್ನೆಲೆಯಲ್ಲಿ ಪ್ರವೀಣ್ ಸೂದ್ ಅವರನ್ನು ನೇಮಕ ಮಾಡಲಾಗಿದೆ.
ಮೇ 14ರಂದು ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಿಸಲಾಗಿತ್ತು. ಸದ್ಯ, ದೆಹಲಿ ಅಬಕಾರಿ ನೀತಿ ಅಕ್ರಮ ಪ್ರಕರಣ ಸೇರಿ ಸಿಬಿಐ ಹಲವು ಸೂಕ್ಷ್ಮ ಪ್ರಕರಣಗಳ ಕುರಿತು ತನಿಖೆ ನಡೆಸುತ್ತಿದೆ.