Monday, August 8, 2022

Latest Posts

ಫೀಲ್ಡ್‌ಗೆ ಇಳಿದ ಎನ್‌ಐಎ: ಮಂಗಳೂರು, ಕೇರಳದಲ್ಲಿ ಪ್ರವೀಣ್ ಹತ್ಯೆ ಮಾಹಿತಿ ಸಂಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸಿಕೊಡಲು ರಾಜ್ಯ ಸರಕಾರ ತೀರ್ಮಾನಿಸಿರುವ ಬೆನ್ನಲ್ಲೇ ಎನ್‌ಐಎ ಅಧಿಕಾರಿಗಳ ಎರಡು ತಂಡಗಳು ಪ್ರಕರಣದ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ಇನ್ನಿಬ್ಬರು ಆರೋಪಿಗಳು ಪೊಲೀಸರ ವಶವಾಗಿರುವುದಾಗಿ ಹೇಳಲಾಗುತ್ತಿದೆಯಾದರೂ ಪೊಲೀಸರು ಇದನ್ನು ಸ್ಪಷ್ಟಪಡಿಸಿಲ್ಲ.

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಹೋದ ಬಳಿಕದ ಬೆಳವಣಿಗೆಯಲ್ಲಿ, ಪ್ರವೀಣ್ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸಲು ಸರಕಾರ ನಿರ್ಧರಿಸಿರುವುದಾಗಿ ಹೇಳಿದ್ದರು. ಇನ್ನೆರಡು ಮೂರು ದಿನಗಳಲ್ಲಿ ಈ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲಾಗುವುದು. ಪ್ರಕರಣದ ಬಗ್ಗೆ ಈಗಾಗಲೇ ಎನ್‌ಐಎಗೆ ಔಪಚಾರಿಕವಾಗಿ ತಿಳಿಸಲಾಗಿದೆ. ಟೆಕ್ನಿಕಲ್ ಹಾಗೂ ಪೇಪರ್ ವರ್ಕ್ ನಡೆಯುತ್ತಿದ್ದು ಎರಡು ಮೂರು ದಿನಗಳೊಳಗೆ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ನಡುವೆ ಅಧಿಕಾರಿಗಳು ಫೀಲ್ಡ್ ಗೆ ಇಳಿದಿದ್ದು, ಮಾಹಿತಿ ಸಂಗ್ರಹಕ್ಕೆ ವೇಗ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss