ಮೋದಿಯವರ ತಾಯಿ ಹೀರಾಬೆನ್ ಸ್ಮರಣಾರ್ಥ: ಇಂದು ವಡ್ನಗರದಲ್ಲಿ ಪ್ರಾರ್ಥನಾ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾನುವಾರ ವಡ್ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಸ್ಮರಣಾರ್ಥ ಪ್ರಾರ್ಥನಾ ಸಭೆ ಆಯೋಜಿಸಲಾಗಿದೆ. ಪ್ರಾರ್ಥನಾ ಸಭೆಯು ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 12:00 ಗಂಟೆವರೆಗೆ ನಡೆಯಲಿದೆ.

ಶತಾಯುಷಿ ಹೀರಾಬೆನ್ ಮೋದಿ ಅವರು ಶುಕ್ರವಾರ ಮುಂಜಾನೆ 3:30 ರ ಸುಮಾರಿಗೆ ಅಹಮದಾಬಾದ್‌ನ ಯುಎನ್ ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್‌ನಲ್ಲಿ ನಿಧನರಾದರು. ಬುಧವಾರ ಆಕೆಯ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶುಕ್ರವಾರ ಗಾಂಧಿನಗರದಲ್ಲಿ ತಮ್ಮ ತಾಯಿಯ ಅಂತಿಮ ಸಂಸ್ಕಾರವನ್ನು ಪ್ರಧಾನಿ ಮೋದಿ ನೆರವೇರಿಸಿದರು. ಇಂದು ಹೀರಾಬೆನ್‌ ಮೋದಿ ಅವರ ಸ್ಮರಣಾರ್ಥವಾಗಿ ಪ್ರಾರ್ಥನಾ ಸಭೆ ಆಯೋಜಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!