ಬಜೆಟ್ ಪೂರ್ವ ಹಲ್ವಾ ಸಮಾರಂಭ: ಸಚಿವಾಲಯದ ಅಧಿಕಾರಿಗಳಿಗೆ ಸಿಹಿ ಹಂಚಿದ ಸಚಿವೆ ನಿರ್ಮಲಾ ಸೀತಾರಾಮನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ನಾರ್ತ್ ಬ್ಲಾಕ್‌ನಲ್ಲಿರುವ ಕೇಂದ್ರ ಹಣಕಾಸು ಸಚಿವಾಲಯದ ಪ್ರಧಾನ ಕಚೇರಿಯಲ್ಲಿ ಮಧ್ಯಂತರ ಕೇಂದ್ರ ಬಜೆಟ್ 2024 ರ (interim Union Budget 2024)ತಯಾರಿ ಪ್ರಕ್ರಿಯೆಯ ಅಂತಿಮ ಹಂತವನ್ನು ಗುರುತಿಸುವ ಸಾಂಪ್ರದಾಯಿಕ ‘ಹಲ್ವಾ ಸಮಾರಂಭ’ (Halwa Ceremony) ನಡೆಯಿತು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಕಬ್ಬಿಣದ ಬಾಣಲೆಯಲ್ಲಿದ್ದ ಹಲ್ವಾವನ್ನು ಸಚಿವಾಲಯದ ಅಧಿಕಾರಿಗಳಿಗೆ ಹಂಚಿದ್ದಾರೆ. ಸಚಿವೆ ಅಧಿಕಾರಿಗಳಿಗೆ ಹಲ್ವಾ ಬಡಿಸುವ ಮೊದಲು ಕೈಯಾಡಿಸಿದ್ದಾರೆ.

ಬಜೆಟ್ ತಯಾರಿಕೆಯ ಲಾಕ್ ಇನ್ ಪ್ರಕ್ರಿಯೆಯು ಪ್ರಾರಂಭವಾಗುವ ಮೊದಲು ಸಾಂಪ್ರದಾಯಿಕ ಹಲ್ವಾ ಸಮಾರಂಭವನ್ನು ಪ್ರತಿ ವರ್ಷ ನಡೆಸಲಾಗುತ್ತದೆ. ಮುಂಬರುವ ಬಜೆಟ್‌ನ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಮತ್ತು ಅಂತಿಮವಾಗಿ ಸಂಸತ್ತಿನಲ್ಲಿ ಮಂಡಿಸುವ ಮೊದಲು ಯಾವುದೇ ಸೋರಿಕೆಯನ್ನು ತಡೆಯಲು ಲಾಕ್-ಇನ್ ಪ್ರಕ್ರಿಯೆಯನ್ನು ಆಚರಿಸಲಾಗುತ್ತದೆ.

ಆಚರಣೆಯ ಪ್ರಕಾರ, ಬಜೆಟ್ ತಯಾರಿಕೆಯ ಪ್ರಕ್ರಿಯೆಯೊಂದಿಗೆ ನೇರವಾಗಿ ಸಂಬಂಧ ಹೊಂದಿರುವ ಎಲ್ಲರಿಗೂ ಭಾರತೀಯ ಸಿಹಿಭಕ್ಷ್ಯವನ್ನು ನೀಡಲಾಗುತ್ತದೆ. ಸಮಾರಂಭದ ನಂತರ, ಹಣಕಾಸು ಸಚಿವರು ಅಂತಿಮವಾಗಿ ಬಜೆಟ್ ಮಂಡಿಸುವವರೆಗೆ ಅಧಿಕಾರಿಗಳು ಹಣಕಾಸು ಸಚಿವಾಲಯದಲ್ಲಿ ಇರಬೇಕಾಗುತ್ತದೆ.

ಫೆಬ್ರವರಿ 1 ರಂದು ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಅನ್ನು ಮಂಡಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!