ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದ್ದ ಬೆನ್ನಲ್ಲೇ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೂ)ಸ್ಥಗಿತ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
1-8ನೇ ತರಗತಿ SC-ST ವಿದ್ಯಾರ್ಥಿಗಳಿಗೆ ನೀಡುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತ ಮಾಡಿಲ್ಲ. ವಿದ್ಯಾರ್ಥಿ ವೇತನ ಸ್ಥಗಿತ ಮಾಡಿದ್ದಾರೆ ಎಂಬುದು ಸುಳ್ಳು ಸುದ್ದಿಯಾಗಿದೆ. ಇದು ರಾಜ್ಯ ಸರ್ಕಾರದ ಯೋಜನೆಯಾಗಿದ್ದು, ಇದನ್ನು ಕೈ ಬಿಟ್ಟಿಲ್ಲ, ಇದು ಸುಳ್ಳು ಸುದ್ದಿಯಾಗಿದೆ. ವಿದ್ಯಾರ್ಥಿ ವೇತನ ಯೋಜನೆ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ಯೋಜನೆ ನಿಲ್ಲಿಸೋದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಪ್ರೀ ಮೆಟ್ರಿಕ್ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲಾಗಿದೆ, ಸರ್ಕಾರ ಇದನ್ನು ಪುನಃ ಜಾರಿ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡದೇ ಹೋದ್ರೆ, ಮಕ್ಕಳು ಎಲ್ಲಿ ಹೋಗಬೇಕು, ಕೂಡಲೇ ಸರ್ಕಾರ ಸ್ಕಾಲರ್ ಶಿಪ್ ನೀಡಬೇಕು ಎಂದು ಆಗ್ರಹಿಸಿದ್ದರು.