ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಮುಂದುವರೆದಿದ್ದು, ಮುಂದಿನ ಮೂರು ದಿನ ರಾಜ್ಯದ ಬಹುತೇಕ ಕಡೆ ಭಾರೀ ಮಳೆ ಆಗಲಿದೆ. ಕರಾವಳಿ, ಮಲೆನಾಡು ಭಾಗದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಜೋರಾಗಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಉತ್ತರ ಕನ್ನಡ, ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಕೊಡಗು, ಹಾಸನ, ಹಾವೇರಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.