ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದರೆ ಇನ್ನೂ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 19ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 21ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ವಿಪರೀತ ಮಳೆ ಸುರಿಯಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತು ನಾಳೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಒಣಹವೆ ಮುಂದುವರೆಯಲಿದೆ.