ಶಾರ್ಜಾದಿಂದ ಹೈದರಾಬಾದ್‌ ಗೆ ಬರುತ್ತಿದ್ದ ಇಂಡಿಗೋ ವಿಮಾನ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಶಾರ್ಜಾದಿಂದ ಹೈದರಾಬಾದ್‌ಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಮುನ್ನೆಚ್ಚರಿಕೆಯಾಗಿ ವಿಮಾನವು ಕರಾಚಿಯಲ್ಲಿ ಲ್ಯಾಂಡಿಂಗ್ ಮಾಡಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಸಂಸ್ಥೆ ಮಾಹಿತಿ ನೀಡಿದೆ.
ಪ್ರಯಾಣಿಕರನ್ನು ಹೈದರಾಬಾದ್‌ಗೆ ಕಳುಹಿಸಿಕೊಡಲು ಕರಾಚಿಗೆ ಹೆಚ್ಚುವರಿ ವಿಮಾನವನ್ನು ಕಳುಹಿಸಲಾಗುವುದು ಎಂದು ಇಂಡಿಗೋ ಸಂಸ್ಥೆ ಹೇಳಿದೆ. “ಇಂಡಿಗೋ ವಿಮಾನ 6E-1406 ಶಾರ್ಜಾದಿಂದ ಹೈದರಾಬಾದ್‌ಗೆ ಆಗಮಿಸುತ್ತಿತ್ತು. ಈ ವೇಳೆ ಪೈಲಟ್ ವಿಮಾನದಲ್ಲಿ ತಾಂತ್ರಿಕ ದೋಷ ಇರುವುದನ್ನು ಗಮನಿಸಿದರು. ತಕ್ಷಣವೇ ಅಗತ್ಯ ಕಾರ್ಯವಿಧಾನಗಳನ್ನು ಅನುಸರಿಸಿ ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನವನ್ನು ಕರಾಚಿಗೆ ತಿರುಗಿಸಲಾಯಿತು ಎಂದು ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ ಎರಡು ವಾರಗಳಲ್ಲಿ ಕರಾಚಿಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ ಎರಡನೇ ಭಾರತೀಯ ವಿಮಾನಯಾನ ಸಂಸ್ಥೆ ಇದಾಗಿದೆ. ಈ ತಿಂಗಳ ಆರಂಭದಲ್ಲಿ ದೆಹಲಿಯಿಂದ ದುಬೈಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನದಲ ಕಾಕ್‌ಪಿಟ್‌ನಲ್ಲಿ ಇಂಧನ ಸೂಚಕ ದೀಪ ಅಸಮರ್ಪಕವಾಗಿ ಕಾರ್ಯನಿರ್ವಹಿಸಿದ ಕಾರಣ ಪಾಕಿಸ್ತಾನದತ್ತ ತಿರುಗಿಸಿ ಲ್ಯಾಂಡಿಗ್ ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!