July 13, 2026
Monday, July 13, 2026
spot_img

ಹೆಲ್ಮೆಟ್ ಧರಿಸದ ನಿರ್ಲಕ್ಷ್ಯಕ್ಕೆ ಅಮೂಲ್ಯ ಜೀವ ಬಲಿ: ಬೆಂಗಳೂರಿನಲ್ಲಿ ತಾಯಿ-ಮಗ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ.

ಮೃತರನ್ನು ಅಶ್ವಿನಿ ಮತ್ತು ಅಭಿಲಾಷ್ ಎಂದು ಗುರುತಿಸಲಾಗಿದೆ. ತಾಯಿ-ಮಗ ಪ್ರಯಾಣಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದುರಂತಕ್ಕೆ ಪ್ರಮುಖ ಕಾರಣವೆಂದರೆ, ಅಶ್ವಿನಿ ಮತ್ತು ಅಭಿಲಾಷ್ ಇಬ್ಬರೂ ಹೆಲ್ಮೆಟ್ ಧರಿಸದೇ ಪ್ರಯಾಣ ಮಾಡುತ್ತಿದ್ದರು. ಅಪಘಾತದ ತೀವ್ರತೆಯಿಂದಾಗಿ ಇಬ್ಬರಿಗೂ ತಲೆಗೆ ಗಂಭೀರ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಚಾರಿ ನಿಯಮಗಳ ಉಲ್ಲಂಘನೆ ಮತ್ತು ಅಜಾಗರೂಕತೆಯು ಹೇಗೆ ಅಮೂಲ್ಯ ಜೀವಗಳನ್ನು ಬಲಿ ಪಡೆಯುತ್ತದೆ ಎಂಬುದಕ್ಕೆ ಈ ಘಟನೆ ಮತ್ತೊಂದು ಸಾಕ್ಷಿಯಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !