‘ಪ್ರೀತಿಯ ರಾಮು’ಗೆ ಯಾಕೋ ಬಿಡುಗಡೆ ಭಾಗ್ಯ ಸಿಕ್ತಿಲ್ಲ.. ಇನ್ನು ಆರು ದಿನ ಸೆರೆವಾಸ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಪರ ವಕೀಲರು ಹೈಕೋರ್ಟ್​ನಲ್ಲಿ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಜಾಮೀನು ಅರ್ಜಿಯ ಮುಂದಿನ ವಿಚಾರಣೆಯನ್ನು ನ್ಯಾಯಮೂರ್ತಿಗಳು ಮುಂದೂಡಿದ್ದಾರೆ.

ಸಿಸಿಎಚ್ ನ್ಯಾಯಾಲಯದಲ್ಲಿ ದರ್ಶನ್ ಪರವಾಗಿ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರೇ ಹೈಕೋರ್ಟ್​ನಲ್ಲಿಯೂ ವಾದ ಮಂಡಿಸುತ್ತಿದ್ದು, ದರ್ಶನ್​ಗೆ ಜಾಮೀನು ಕೊಡಿಸುವ ಪ್ರಯತ್ನ ಮಾಡುತ್ತಿದ್ದಾರೆ.

ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿರುವ ಹೈಕೋರ್ಟ್ ಪೀಠದಲ್ಲಿ ಇಂದು ವಿಚಾರಣೆ ನಡೆದಿದೆ. ಸಿವಿ ನಾಗೇಶ್ ಅವರು ದರ್ಶನ್ ಪರವಾಗಿ ವಾದ ಮಂಡನೆ ಆರಂಭಿಸಿ, ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದು, ಅವರನ್ನು ನಿನ್ನೆ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದರ್ಶನ್​ಗೆ ಚಿಕಿತ್ಸೆಯ ಅಗತ್ಯವಿದೆ. ಹಾಗಾಗಿ ಜಾಮೀನು ಕೋರುತ್ತಿದ್ದೇವೆ ಎಂದು ಹೇಳಿದರು.

ಸಿವಿ ನಾಗೇಶ್ ಅವರ ಮಾತು ಆಲಿಸಿ, ಜೈಲಧಿಕಾರಿಗಳಿಂದ ದರ್ಶನ್​ರ ಆರೋಗ್ಯ ಸ್ಥಿತಿಯ ವರದಿಯನ್ನು ಕೇಳಿದರು. ಅಕ್ಟೋಬರ್ 28ರ ಒಳಗಾಗಿ ಬಳ್ಳಾರಿ ಜೈಲು ಅಧಿಕಾರಿಗಳು ದರ್ಶನ್​ರ ಆರೋಗ್ಯ ಸ್ಥಿತಿಯ ಬಗ್ಗೆ ವರದಿಯನ್ನು ಹೈಕೋರ್ಟ್​ಗೆ ನೀಡಬೇಕಿದ್ದು, ವರದಿ ಆಧರಿಸಿ ದರ್ಶನ್​ಗೆ ಜಾಮೀನು ನೀಡಬೇಕೊ ಇಲ್ಲವೋ ಎಂಬುದನ್ನು ವಿಚಾರ ಮಾಡಲಾಗುತ್ತದೆ.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!