ಸಣ್ಣ ವಯಸ್ಸಿಗೆ ಹೆಣ್ಮಕ್ಕಳ ಗರ್ಭಧಾರಣೆ: ಸಮಸ್ಯೆ ತಪ್ಪಿದ್ದಲ್ಲ ಜೋಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಯಸ್ಸಲ್ಲದ ವಯಸ್ಸಿನಲ್ಲಿ ಮದುವೆ ಮಾಡುವುದು(ಬಾಲ್ಯ ವಿವಾಹ) ಅವರ ಜೀವನ ನರಕ ಆಗುವುದು ಎರಡೂ ಒಂದೇ. ಸಣ್ಣ ವಯಸ್ಸಿಗೇ  ಮದುವೆ ಆಗಿರುವ ಅನೇಕ ಹೆಣ್ಣುಮಕ್ಕಳು ಗರ್ಭ ಧರಿಸುತ್ತಿದ್ದಾರೆ. ಹೆಣ್ಣುಮಕ್ಕಳಿಗೆ ಮತ್ತು ಅವರ ಪೋಷಕರಿಗೆ ಸಂಪೂರ್ಣ ತಿಳುವಳಿಕೆ ಇಲ್ಲದಿರುವುದೇ ಇದಕ್ಕೆ ಮುಖ್ಯ ಕಾರಣ. ಸಂತಾನೋತ್ಪತ್ತಿ ಮತ್ತು ಲೈಂಗಿಕ ಆರೋಗ್ಯದ ಬಗ್ಗೆ ಸರಿಯಾದ ತಿಳುವಳಿಕೆಯ ಕೊರತೆಯಿಂದಾಗಿ ಅನೇಕ ಹುಡುಗಿಯರು ಚಿಕ್ಕ ವಯಸ್ಸಿನಲ್ಲಿಯೇ ಗರ್ಭ ಧರಿಸುತ್ತಾರೆ.

ಇಂತಹ ವಿಷಮ ಪರಿಸ್ಥಿತಿ ಹೆಣ್ಣುಮಕ್ಕಳಿಗೆ ಜೀವಮಾನವಿಡೀ ದೈಹಿಕ, ಮಾನಸಿಕ ಮತ್ತು ಆರೋಗ್ಯ ಸಮಸ್ಯೆಗಳಿಗೆ ದಾರಿಮಾಡಿಕೊಡುತ್ತದೆ ಎಂಬುದು ಸ್ಪಷ್ಟವಾದ ಸಂಗತಿ. ಇದರ ಜೊತೆಗೆ ಹುಟ್ಟುವ ಮಕ್ಕಳಲ್ಲಿ ಅನೇಕ ಕಾಯಿಲೆಗಳು ಉದ್ಭವಿಸುತ್ತವೆ. ಚಿಕ್ಕ ವಯಸ್ಸಿನಲ್ಲಿ ಗರ್ಭಿಣಿಯಾಗುವ ಹುಡುಗಿಯರು ಅನಿಮಿಯಾ, ಅಧಿಕ ರಕ್ತದೊತ್ತಡ, ಅವಧಿಪೂರ್ವ ಮಕ್ಕಳ ಜನನ, ಒತ್ತಡ ಮತ್ತು ಮಾನಸಿಕ ಕಿರುಕುಳದಂತಹ ಸಮಸ್ಯೆಗಳು ಉದ್ಭವಿಸಬಹುದು.

ಇವರ ಹೊಟೆಯಲ್ಲಿ ಹುಟ್ಟಿದ ಮಗುವಿಗೂ ಕಾಯಿಲೆಗಳು ಬಾಧಿಸದೆ ಇರಲಾರವು. ಕಡಿಮೆ ತೂಕ, ಉಸಿರಾಟದ ತೊಂದರೆ, ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆ ಶಿಶುಗಳಲ್ಲಿ ಕಂಡುಬರುತ್ತದೆ. ಕೆಲವೊಮ್ಮೆ ಹುಟ್ಟಿದ ಕೆಲವೇ ಗಂಟೆಗಳಲ್ಲಿ ಮಕ್ಕಳು ಸಾವನ್ನಪ್ಪಿರುವ ಘಟನೆಗಳೂ ಕೂಡ ಸಾಕ್ಷಿಯಿವೆ. ಪೋಷಕರು ಚಿಕ್ಕ ವಯಸ್ಸಿನಲ್ಲೇ ನಿಮ್ಮ ಹೆಣ್ಣು ಮಕ್ಕಳಿಗೆ ಮದುವೆ ಮಾಡುವ ಮುನ್ನ ಯೋಚಿಸಿ ಮುಂದಾಗುವ ಅನಾಹುತಕ್ಕೆ ನಾಂದಿ ಹಾಡಬೇಕು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!