ಪೋರ್ಚುಗಲ್‌ ನಲ್ಲಿ ಭಾರತೀಯ ಗರ್ಭಿಣಿ ಸ್ತ್ರೀ ಸಾವು: ಆರೋಗ್ಯ ಸಚಿವೆ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪೋರ್ಚುಗಲ್‌ ನಲ್ಲಿ 34 ವರ್ಷದ ಭಾರತೀಯ ಗರ್ಭಿಣಿ ಪ್ರವಾಸಿ ಮಹಿಳೆಯೊಬ್ಬರು ಆಸ್ಪತ್ರೆಯೊಂದರಲ್ಲಿ ಹಾಸಿಗೆ ಲಭ್ಯತೆಯಿಲ್ಲದ ಕಾರಣ ಇನ್ನೊಂದು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಇದರ ಬೆನ್ನಲ್ಲೇ ಪೋರ್ಚುಗಲ್ ನ ಆರೋಗ್ಯ ಸಚಿವೆ ಮಾರ್ಟಾ ಟೆಮಿಡೊ ರಾಜೀನಾಮೆ ನೀಡಿದ್ದಾರೆ.

ಮೂಲಗಳ ವರದಿಯ ಪ್ರಕಾರ, 31 ವಾರಗಳ ಗರ್ಭಿಣಿಯಾಗಿದ್ದ ಭಾರತೀಯ ಮಹಿಳೆಯಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೇಶದ ಅತಿದೊಡ್ಡ ಆರೋಗ್ಯ ಸೌಲಭ್ಯಗಳಲ್ಲಿ ಒಂದಾದ ಸಾಂತಾ ಮಾರಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಆಕೆಯ ಆರೋಗ್ಯ ಸ್ಥಿತಿಯನ್ನು ಸ್ಥಿರಗೊಳಿಸಲಾಯಿತು. ಆದರೆ ನವಜಾತ ಶಿಶುಗಳ ವಿಭಾಗವು ತುಂಬಿದ್ದರಿಂದ ಆಸ್ಪತ್ರೆಯು ಅವಳನ್ನು ಸಾವೊ ಫ್ರಾನ್ಸಿಸ್ಕೊ ​​​​ಕ್ಸೇವಿಯರ್ ಆಸ್ಪತ್ರೆಗೆ ವರ್ಗಾಯಿಸಿತು. ಆದರೆ ವರ್ಗಾವಣೆ ಮಾಡುವಾಗ ಮಾರ್ಗ ಮಧ್ಯೆ ಆಕೆ ಹೃದಯ ಸ್ತಂಭನಕ್ಕೆ ಒಳಗಾಗಿ ಸಾವನ್ನಪ್ಪಿದರು.

ಈ ಹಿನ್ನೆಲೆಯಲ್ಲಿ ತುರ್ತು ಆರೈಕೆ ಸೇವೆಗಳ ಅಲಭ್ಯತೆ. ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಮತ್ತು ರಾಷ್ಟ್ರೀಯ ಆರೋಗ್ಯ ಸೇವೆಯ ಅಸಾಮರ್ಥ್ಯ ಮುಂತಾದ ತೊಡಕುಗಳನ್ನು ಅನುಭವಿಸಿದ ಗರ್ಭಿಣಿಯರ ಪ್ರಕರಣಗಳ ಬಗ್ಗೆ ತೀವ್ರ ಟೀಕೆಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಪೋರ್ಚುಗಲ್‌ನ ಆರೋಗ್ಯ ಸಚಿವ ಮಾರ್ಟಾ ಟೆಮಿಡೊ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!