ಆಟೋ ರಿಕ್ಷಾ ಡಿಕ್ಕಿ ಹೊಡೆದು ಗರ್ಭಿಣಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗರ್ಭಿಣಿಯೊಬ್ಬರಿಗೆ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಅಂಕೋಲಾದ ಬಾವಿಕೇರಿಯಲ್ಲಿ ನಡೆದಿದೆ.

ಶೋಭಾ ಗೋಪಾಲ ನಾಯಕ (28) ಮೃತ ದುರ್ದೈವಿ. ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಅವರು ತನ್ನ ಮನೆ ಮುಂದಿನ ಡಾಂಬರು ರಸ್ತೆ ಪಕ್ಕದ ಮಣ್ಣಿನ ರಸ್ತೆಯಲ್ಲಿ ತನ್ನ ಗಂಡನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಆಟೊ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶೋಭಾ ಮೃತಪಟ್ಟಿದ್ದಾರೆ.

ಪಟ್ಟಣದ ಲಕ್ಷೇಶ್ವರ – ಕುಂಬಾರಕೇರಿ ವ್ಯಾಪ್ತಿಯ ರಿಕ್ಷಾ ಚಾಲಕ ಅಪಘಾತ ನಡೆದ ಬಳಿಕ ರಿಕ್ಷಾ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು ಅಂಕೋಲಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!