ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮರಕ್ಕೆ ಡಿಕ್ಕಿ ಹೊಡೆದ ಅಂಬುಲೆನ್ಸ್: ಹೆರಿಗೆಗಾಗಿ ಆಸ್ಪತ್ರೆಗೆ ಹೊರಟಿದ್ದ ತುಂಬು ಗರ್ಭಿಣಿ ಸೇರಿ ಮೂವರು ಸ್ಥಳದಲ್ಲೇ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ತಮಿಳುನಾಡಿನ ಕಲಕುರಿಚಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟಯರ್ ಸ್ಪೊಟಗೊಂಡ ಪರಿಣಾಮ ಅಂಬುಲೆನ್ಸ್ ಮರಕ್ಕೆ ಡಿಕ್ಕಿ ಹೊಡೆದ್ದಿದ್ದು, ಗರ್ಭಿಣಿ ಸೇರಿ ಮೂರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸೊರಪುಟ್ಟ ಗ್ರಾಮದ ನಿವಾಸಿ ತುಂಬು ಗರ್ಭಿಣಿ ಜಯಲಕ್ಷಿ (26), ಅತ್ತೆ ಸೆಲ್ವಿ (55) ನಾದಿನಿ ಅಂಬಿಕಾ (30) ಮೃತರು.

ಜಯಲಕ್ಷ್ಮಿ ಅವರಿಗೆ ಗುರುವಾರ ಬೆಳಗಿ ಜಾವ ಹೆರಿಗೆ ನೋವು ಪ್ರಾರಂಭವಾಗಿದ್ದು, ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಜಯಲಕ್ಷ್ಮಿ ಜೊತೆ ಅತ್ತೆ, ನಾದಿನಿ ಕೂಡ ಹೋಗುತ್ತಿದ್ದರು.

ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದು, ಗರ್ಭಿಣಿ ಕುಟುಂಬಕ್ಕೆ 5 ಲಕ್ಷ ರೂ., ಅತ್ತೆ ಹಾಗೂ ನಾದಿನಿ ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss