ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಅಭಿನಯದ ಟಗರು ಪಲ್ಯ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ ಆಗಿದೆ.
ಪ್ರೀಮಿಯರ್ ಶೋ ನೋಡಿದ ಪ್ರೇಮ್ ಖುಷಿಯಿಂದ ಕಣ್ಣೀರಿಟ್ಟಿದ್ದಾರೆ. ಕುಟುಂಬ ಸಮೇತರಾಗಿ ಬಂದು ಸಿನಿಮಾ ನೋಡಿದ ಪ್ರೇಮ್ ಮಗಳ ಆಕ್ಟಿಂಗ್‌ನೋಡಿ ಖುಷಿ ಪಟ್ಟಿದ್ದಾರೆ.
ಇಡೀ ಚಿತ್ರತಂಡ ನನ್ನ ಮಗಳನ್ನು ಚೆನ್ನಾಗಿ ನೋಡಿಕೊಂಡಿದೆ, ಎಲ್ಲರ ಬೆಂಬಲ, ಆಶೀರ್ವಾದ ಅವಳ ಮೇಲಿದೆ. ಅವಳಿಗೆ ಒಳ್ಳೆಯ ಭವಿಷ್ಯ ಇದೆ ಎಂದು ಮಗಳನ್ನು ತಬ್ಬಿ ಕಣ್ಣೀರಿಟ್ಟಿದ್ದಾರೆ.