ರಾಜ್ಯಪಾಲರನ್ನು ಭೇಟಿಯಾದ ಪ್ರೇಮ್ ಸಿಂಗ್ ತಮಾಂಗ್: ಸಿಕ್ಕಿಂನಲ್ಲಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ (ಎಸ್‌ಕೆಎಂ)ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಪ್ರೇಮ್ ಸಿಂಗ್ ತಮಾಂಗ್ ಅವರು ಸೋಮವಾರ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ರಾಜ್ಯಪಾಲರು ಎಲ್ಲಾ ಶಾಸಕರಿಗೆ ಅಭಿನಂದಿಸಿ ಶುಭ ಹಾರೈಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏಪ್ರಿಲ್ 18 ರಂದು ನಡೆದ ಸಿಕ್ಕಿಂ ವಿಧಾನಸಭೆ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ(SKM) 32 ಸದಸ್ಯ ಬಲದ ವಿಧಾನಸಭೆಯಲ್ಲಿ 31 ಸ್ಥಾನಗಳನ್ನು ಗೆದ್ದುಕೊಂಡು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಿದೆ. ಪ್ರತಿಪಕ್ಷ ಎಸ್‌ಡಿಎಫ್ ಕೇವಲ ಒಂದು ಸ್ಥಾನವನ್ನು ಪಡೆದುಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!