ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರೇಮ್ ಸಿಂಗ್ ತಮಾಂಗ್ ಪ್ರಮಾಣವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಕ್ಕಿಂ ರಾಜ್ಯದ ಮುಖ್ಯಮಂತ್ರಿಯಾಗಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (SKM) ನಾಯಕ ಪ್ರೇಮ್ ಸಿಂಗ್ ತಮಾಂಗ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ಪಾಲ್ಜೋರ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಲಕ್ಷ್ಮಣ್ ಆಚಾರ್ಯ ಅವರು ತಮಾಂಗ್ ಮತ್ತು ಅವರ ಮಂತ್ರಿಮಂಡಲಕ್ಕೆ ಪ್ರಮಾಣ ವಚನ ಬೋಧಿಸಿದರು.

ತಮಾಂಗ್ ಹಿಮಾಲಯನ್ ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು.

ಸಿಕ್ಕಿಂ ವಿಧಾನಸಭಾ ಚುನಾವಣೆಯಲ್ಲಿ SKM 32 ಸ್ಥಾನಗಳಲ್ಲಿ 31 ಸ್ಥಾನಗಳನ್ನು ಗೆದ್ದಿತ್ತು. ಪ್ರತಿಪಕ್ಷ ಎಸ್ಡಿಎಫ್ ಒಂದು ಸ್ಥಾನವನ್ನು ಗೆದ್ದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!