Monday, June 27, 2022

Latest Posts

ಇದೇ ಅ.14ಕ್ಕೆ ಬಿಡಗಡೆಯಾಗಲಿದೆ ‘ಪ್ರೇಮಂ ಪೂಜ್ಯಂ’ ಚಿತ್ರದ ಮೊದಲ ಟ್ರೈಲರ್!

ಹೊಸದಿಗಂತ ಆನ್ ಲೈನ್ ಡೆಸ್ಕ್:

ನೆನಪಿರಲಿ ಪ್ರೇಮ್ ನಟಿಸುತ್ತಿರುವ 25ನೇ ಚಿತ್ರ ‘ಪ್ರೇಮಂ ಪೂಜ್ಯಂ’ ನ ಟ್ರೈಲರ್ ಇದೇ ಅ.14ರಂದು ರಿಲೀಸ್ ಆಗಲಿದೆ.
ಈ ಬಗ್ಗೆ ಇನ್ ಸ್ಟಾಗ್ರಾಂ ನಲ್ಲಿ ಹಂಚಿಕೊಂಡ ಪ್ರೇಮ್, ನಮ್ಮ ಕನಸಿನ ಒಂದು ಪುಟ್ಟ ಅನುಭವ ಟ್ರೈಲರ್ ಮೂಲಕ ನಿಮ್ಮ ಮುಂದೆ ಇಡುತ್ತಿದ್ದೇವೆ ಇದೇ ಅಕ್ಟೋಬರ್ 14ಕ್ಕೆ.. ಎಂದಿನಂತೆ ನಿಮ್ಮ ಪ್ರೀತಿ, ಆಶೀರ್ವಾದ ಸದಾ ನಮ್ಮ ಮೇಲಿರಲಿ ಎಂದು ಬರೆದುಕೊಂಡಿದ್ದಾರೆ.
ಈ ಅಕ್ಟೋಬರ್ 29 ಕ್ಕೆ ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ನಿರ್ದೇಶಕ ರಾಘವೇಂದ್ರ ಆಕ್ಷನ್ ಕಟ್ ಹೇಳಿದ್ದಾರೆ. ಕೆದಂಬಾಡಿ ಕ್ರಿಯೇಷನ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ. ಚಿತ್ರದಲ್ಲಿ ಸುಮಾರು 14 ಹಾಡುಗಳಿದ್ದು ಈಗಾಗಲೇ 10 ಹಾಡುಗಳು ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿ ಜನರ ಮನಗೆದ್ದಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss