Tuesday, August 16, 2022

Latest Posts

‘ಪ್ರೇಮಂ ಪೂಜ್ಯಂ’ ಚಿತ್ರದ ರಿಲೀಸ್ ಡೇಟ್ ಮುಂದೂಡಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇದೇ ಅ.29ರಂದು ರಿಲೀಸ್ ಆಗಬೇಕಿದ್ದ ನಟ ಪ್ರೇಮ್ ಅಭಿನಯದ ‘ಪ್ರೇಮಂ ಪೂಜ್ಯಂ’ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ.
ಶುಕ್ರವಾರ ಬಿಡುಗಡೆಯಾಗಬೇಕಿದ್ದ ಸಿನಿಮಾ ಎರಡು ವಾರಗಳ ಕಾಲ ಮುಂದಕ್ಕೆ ಹೋಗಿದ್ದು, ನ.12ಕ್ಕೆ ಚಿತ್ರ ರಿಲೀಸ್ ಆಗಲಿದೆ.
ಈಗಾಗಲೇ ಬಿಡುಗಡೆಯಾಗಿರುವ ಕೋಟಿಗೊಬ್ಬ-3, ಸಲಗ ಚಿತ್ರಗಳ ಪ್ರದರ್ಶನದಲ್ಲಿ ಸಾಕಷ್ಟು ಚಿತ್ರಮಂದಿರಗಳಿದ್ದು, ಮತ್ತೆ ಭಜರಂಗಿ-2 ಸಿನಿಮಾಗೂ ಸಾಕಷ್ಟು ಚಿತ್ರಮಂದಿರಗಳು ಸಿಗುವುದರಿಂದ ನಮಗೆ ಥಿಯೇಟರ್ ಗಳು ಸಿಗುವುದು ಕಷ್ಟವಾಗಬಹುದು.
ರಾಜ್ಯದ 350 ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಆಶಯ ವ್ಯಕ್ತಪಡಿಸಿದೆ. ಈ ಚಿತ್ರಕ್ಕೆ ನಿರ್ದೇಶಕ ರಾಘವೇಂದ್ರ ಆಕ್ಷನ್ ಕಟ್ ಹೇಳಿದ್ದಾರೆ. ಕೆದಂಬಾಡಿ ಕ್ರಿಯೇಷನ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ. ಚಿತ್ರದಲ್ಲಿ ಸುಮಾರು 14 ಹಾಡುಗಳಿದ್ದು ಈಗಾಗಲೇ 10 ಹಾಡುಗಳು ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿ ಜನರ ಮನಗೆದ್ದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss