Sunday, October 1, 2023

Latest Posts

ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಆಪ್ತರ ಮನೆ ಮೇಲೆ ಇ.ಡಿ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರ ಆಪ್ತರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಇಡಿ ಮೂಲಗಳು ತಿಳಿಸಿವೆ.

ತಮಿಳುನಾಡಿನ 10 ಸ್ಥಳಗಳಲ್ಲಿ ದಾಳಿ ನಡೆದಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಾಲಾಜಿ ಅವರನ್ನು ಜೂನ್ 14ರಂದು ಇ.ಡಿ ಅಧಿಕಾರಿಗಳು ಅರೆಸ್ಟ್‌ ಮಾಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೆಂಥಿಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 15ರವರೆಗೆ ವಿಸ್ತರಣೆ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!