ಟಿ20 ವಿಶ್ವಕಪ್‌ಗೆ ತಯಾರಿ ಶುರು: ಪಾಕ್ ಆಟಗಾರರಿಗೆ ಸೇನೆಯಿಂದ ಕಠಿಣ ತರಬೇತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಟಿ20 ವಿಶ್ವಕಪ್‌ (T20 World Cup 2024) ಟೂರ್ನಿಗಾಗಿ ಪಾಕ್‌ ಕ್ರಿಕೆಟ್‌ ತಂಡ (Pakistan Cricket Team) ಭರ್ಜರಿ ತಯಾರಿ ಶುರು ಮಾಡಿದೆ. ಪಾಕ್‌ ಸೇನೆಯಿಂದ ಕಠಿಣ ತರಬೇತಿ ಕೊಡಿಸಲಾಗುತ್ತಿದೆ.

ಪಾಕಿಸ್ತಾನ ಕ್ರಿಕೆಟಿಗರು ವಿಶ್ವಕಪ್‌ ಟೂರ್ನಿಗಾಗಿ ಸ್ನೈಪರ್ ಶೂಟಿಂಗ್, ಭಾರವಾದ ಕಲ್ಲು ಹೊತ್ತು ನಡೆಯುವುದು, ಸೈನಿಕರನ್ನ ಬೆನ್ನ ಮೇಲೆ ಹೊತ್ತುಕೊಂಡು ಮುಂದೆ ಸಾಗುವ ಅಭ್ಯಾಸಗಳನ್ನ ಮಾಡುತ್ತಿದ್ದಾರೆ.

ಈ ಕುರಿತ ವೀಡಿಯೋ ಮತ್ತು ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ, ಟೀಂ ಇಂಡಿಯಾ ಕ್ರಿಕೆಟ್‌ ಫ್ಯಾನ್ಸ್‌ (Team India Cricket Fans) ಪಾಕ್‌ ಕ್ರಿಕೆಟಿಗರನ್ನ ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.

ಟಿ20 ವಿಶ್ವಕಪ್​​ಗೆ ಮುಂಚಿತವಾಗಿ ರಾಷ್ಟ್ರೀಯ ಕ್ರಿಕೆಟಿಗರು ಗಾಯಗೊಳ್ಳಬಾರದು ಎಂಬ ಉದ್ದೇಶದಿಂದ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ, ಸೇನೆಯ ಮೂಲಕ ಅವರಿಗೆ ತರಬೇತಿ ನೀಡುತ್ತಿದೆ. ಆದ್ರೆ ಪಾಕ್‌ ಸೇನೆಯು ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿರುವ ಕ್ರಿಕೆಟಿಗರು ಸಂಬಂಧವಿಲ್ಲದ ಫಿಟ್ನೆಸ್​ ಚಟುವಟಿಕೆಗಳಲ್ಲಿ ತೊಡಗಿದ್ದಾರೆ.

2024ರ ಟಿ20 ವಿಶ್ವಕಪ್‌ ಟೂರ್ನಿಯು ವೆಸ್ಟ್ ಇಂಡೀಸ್ (West Indies) ಮತ್ತು ಅಮೆರಿಕದ (USA) ಆತಿಥ್ಯದಲ್ಲಿ ಜೂನ್‌ 1 ರಿಂದ ಜೂನ್‌ 29ರ ವರೆಗೆ ನಡೆಯಲಿದೆ. ಈ ಬಾರಿ 16 ರಿಂದ 20ಕ್ಕೆ ತಂಡಗಳ ಸಂಖ್ಯೆಯನ್ನು ಹೆಚ್ಚಿಸಿದ್ದು, ಒಟ್ಟು 4 ಗುಂಪುಗಳಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ. ಅಲ್ಲದೇ ಸೂಪರ್‌-12 ಹಂತವನ್ನು ಸೂಪರ್‌-8ಗೆ ಇಳಿಸಲಾಗಿದೆ. ಸೂಪರ್‌-8 ಗುಂಪಿನಲ್ಲಿ ಅಗ್ರಸ್ಥಾನ ಪಡೆದ 4 ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!