ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ 52 ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಮುಂದಾಗಿರುವ ಬಿಬಿಎಂಪಿಯು ಈ ವರೆಗೆ 42 ಕ್ಯಾಂಟಿನ್ ನಿರ್ಮಾಣಕ್ಕೆ ಸ್ಥಳ ಗುರುತಿಸಿದೆ. ಬಿಬಿಎಂಪಿಯ ವಾರ್ಡ್ ಸಂಖ್ಯೆ 198 ರಿಂದ 225ಕ್ಕೆ ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಹೆಚ್ಚುವರಿ ವಾರ್ಡ್‌ನಲ್ಲಿ ಹಾಗೂ ಮೊಬೈಲ್ ಕ್ಯಾಂಟೀನ್ ಇರುವ ವಾರ್ಡ್‌ಗಳಲ್ಲಿ ಸ್ಥಿರ ಕ್ಯಾಂಟೀನ್ ನಿರ್ಮಾಣಕ್ಕೆ ಸೂಚಿಸಿದೆ.
ಈಗಾಗಲೇ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈಗಾಗಲೇ ಎರಡು ಸ್ಥಿರ ಇಂದಿರಾ ಕ್ಯಾಂಟೀನ್ ನಿರ್ಮಿಸಲಾಗಿದೆ. ಉಳಿದ 50 ವಾರ್ಡ್‌ಗಳ ಪೈಕಿ 42 ವಾರ್ಡ್ ನಲ್ಲಿ ಕ್ಯಾಂಟೀನ್ ನಿರ್ಮಾಣಕ್ಕೆ ಸ್ಥಳ ನಿಗದಿಪಡಿಸಲಾಗಿದೆ. ಉಳಿದ 8 ವಾರ್ಡ್‌ನಲ್ಲಿ ಸ್ಥಳ ಹುಡುಕಾಟ ನಡೆಸಲಾಗಿದೆ.
ರಾಜ್ಯ ಸರ್ಕಾರ ಪ್ರತಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ತಲಾ 48 ಲಕ್ಷ ನೀಡಲಿದೆ ಎನ್ನಲಾಗಿದೆ. ಇಂದಿರಾ ಕ್ಯಾಂಟೀನ್ ಹಾಗೂ ಅಡುಗೆ ಮನೆ ಇದ್ದರೆ 87 ಲಕ್ಷ ನೀಡಲಿದೆ ಎನ್ನಲಾಗಿದೆ. ಇವುಗಳ ನಿರ್ಮಾಣಕ್ಕೆ ಶೀಘ್ರದಲ್ಲಿ ಟೆಂಡರ್ ಆಹ್ವಾನಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.