ಮೇಘಾಲಯದಲ್ಲಿ ಸರ್ಕಾರ ರಚನೆಗೆ ತಯಾರಿ: ರಾಜ್ಯಪಾಲರನ್ನು ಭೇಟಿಯಾದ ಕಾನ್ರಾಡ್ ಸಂಗ್ಮಾ!

ಹೊಸದಿಗಂತ ಡಿಜಿಟಲ್ ಡೆಸ್ಕ್‌ :

ಮೇಘಾಲಯ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ ನ್ಯಾಷನಲ್ ಪೀಪಲ್ಸ್ ಪಾರ್ಟಿ ಪಕ್ಷದ ಮುಖ್ಯಸ್ಥ ಕಾನ್ರಾಡ್ ಸಂಗ್ಮಾ (Conrad Sangma) ಇಂದು ರಾಜ್ಯಪಾಲ ಫಾಗು ಚೌಹಾಣ್ (Phagu Chauhan) ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅನುಮತಿ ಕೋರಿ ಮನವಿ ಮಾಡಿದ್ದಾರೆ.

ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಅವರು, ಬಿಜೆಪಿಯ ಇಬ್ಬರು ಶಾಸಕರು, ಬಗ್ಮಾರಾದ ಸ್ವತಂತ್ರ ಶಾಸಕರು ಸೇರಿದಂತೆ ಹಲವಾರು ಶಾಸಕರು ನಮಗೆ ಬೆಂಬಲ ನೀಡಿದ್ದಾರೆ. ಈ ಹಿನ್ನೆಲೆ ನಾವು ಸರ್ಕಾರ ರಚನೆಗೆ ತಯಾರಿ ಆರಂಭಿಸಿದ್ದೇವೆಎಂದು ಅವರು ಹೇಳಿದ್ದಾರೆ.

11 ಸ್ಥಾನಗಳ ಮೂಲಕ 2ನೇ ಅತಿದೊಡ್ಡ ಪಕ್ಷವಾಗಿರುವ ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿಯ (UDP) ಜೊತೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಾತನಾಡಲು ನಿರಾಕರಿಸಿದ ಸಂಗ್ಮಾ, ನಾವು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಅವರೊಂದಿಗೆ ಚರ್ಚಿಸುತ್ತೇವೆ. ನಾನು ಈಗ ಎಲ್ಲಾ ವಿವರಗಳನ್ನು ನೀಡಲು ಬಯಸುವುದಿಲ್ಲ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!