ಚಿಕ್ಕಬಳ್ಳಾಪುರದಲ್ಲಿ ಆರ್.ಆರ್.ಆರ್ ಪ್ರಿ-ರಿಲೀಸ್‌ಗೆ ಸಿದ್ಧತೆ

ಚಿಕ್ಕಬಳ್ಳಾಪುರ :

ಬಹು ನಿರೀಕ್ಷಿತ ತೆಲುಗು ಸಿನಿಮಾ ಇದೇ ತಿಂಗಳಲ್ಲಿ ವಿಶ್ವದಾದ್ಯಾಂತ ತೆರೆ ಬರಲಿದ್ದು, ಆರ್.ಆರ್.ಆರ್ ಸಿನಿಮಾ ಬಗ್ಗೆ ಅಭಿಮಾನಿ ವಲಯದಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಹೊಂದಿದ್ದಾರೆ. ಚಿಕ್ಕಬಳ್ಳಪುರದಲ್ಲಿ ಇದೇ ತಿಂಗಳ 19ರಂದು ಆರ್,ಆರ್,ಆರ್ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯಲಿದ್ದು, ನಗರದ ಭೈಪಾಸ್ ರಸ್ತೆಯಲ್ಲಿ ವೇದಿಕೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಿರುವ ಚಿತ್ರಗಳು ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಖ್ಯಾತ ಚಲನ ಚಿತ್ರ ನಿರ್ದೇಶಕ ಎಸ್.ಎಸ್ ರಾಜಮೌಳಿ ತಮ್ಮ ಸಿನಿಮಾ ಮೇಕಿಂಗ ಮೂಲಕ ದೊಡ್ಡಭರವಸೆ ಸೃಷ್ಟಿಸಿದ್ದಾರೆ, ಅದು ಆರ್,ಆರ್,ಆರ್ ಟ್ರೇಲರ್’ನಲ್ಲೂ ಸಾಬೀತಾಗಿದೆ, ಆದರೆ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿರುವಾಗ ದಕ್ಷಣ ಭಾರತದ ಕರ್ನಾಟಕದಲ್ಲಿ ಅದರಲ್ಲೂ ತೆಲುಗು ಪ್ರಭಾವ ಹೆಚ್ಚಾಗಿರುವ ಚಿಕ್ಕಬಳ್ಳಾಪುರದಲ್ಲಿ ಪ್ರೀ-ರಿಲೀಸ್ ಕಾರ್ಯಕ್ರಮ ಮಾಡುತ್ತಿರುವುದು ಅಭಿಮಾನಿಗಳಿಗೆ ಸಂತೋಷವಾಗಿದೆ.

19 ರಂದು ಕಾರ್ಯಕ್ರಮ : ತೆಲುಗು ಚಲನ ಚಿತ್ರದ ಖ್ಯಾತ ನಿರ್ದೇಶಕ ಎಸ್.ಎಸ್ ರಾಜಮೌಳಿ ನಿರ್ದೇಶನದ ಜೂ.ಎನ್,ಟಿ.ಆರ್ ಹಾಗೂ ರಾಮ್ ಚರಣ್ ಅಭಿನಯದ ಆರ್.ಆರ್.ಆರ್ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮದ ಅಂಗವಾಗಿ ಚಿಕ್ಕಬಳ್ಳಾಪುರ ನಗರದ ಬೈಪಾಸ್ ರಸ್ತೆಯಲ್ಲಿ ವೇದಿಕೆ ಕಾರ್ಯಕ್ರಮಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಹಾಗೂ ಇದೇ ತಿಂಗಳ 19 ರಂದು ಕಾರ್ಯಕ್ರಮ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಧಿಕೃತ ಘೋಷಣೆ ಬಾಕಿ : ಚಿಕ್ಕಬಳ್ಳಾಪುರ ನಗರದಲ್ಲಿ ನಡೆಯಲಿರುವ ಆರ್.ಆರ್. ಆರ್ ಪ್ರಿಲೀಸ್ ಕಾರ್ಯಕ್ರಮದ ಬಗ್ಗೆ ಚಿತ್ರತಂಡದ ಮೇನೆಜ್ಮೆಂಟ್ ಅಧಿಕೃತವಾಗಿ ಘೋಷಿಸುವುದು ಮಾತ್ರ ಬಾಕಿ ಇದೆ. ಹಾಗೂ ಈಗಾಗಲೇ ಪ್ರಿ ರಿಲೀಸ್ ಕಾರ್ಯಕ್ರಮಕ್ಕೆ ಬೇಕಿರುವ ಅಗತ್ಯ ಕೆಲಸಗಳನ್ನು ಮಾಡುವಲ್ಲಿ ನಿರತರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!