ಐಪಿಎಲ್ ಟೂರ್ನಿ ಆರಂಭಕ್ಕೆ ಸಿದ್ಧತೆ: ನೂತನ ಜೆರ್ಸಿ ಅನಾವರಣ ಮಾಡಿದ ಲಖನೌ ಸೂಪರ್ ಜೈಂಟ್ಸ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಹುನಿರೀಕ್ಷಿತ 16ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೆ ಇನ್ನು ಕೆಲವು ದಿನ ಬಾಕಿ ಉಳಿದಿದ್ದು, ಈ ಹಿನ್ನೆಲೆ ಲಖನೌ ಸೂಪರ್ ಜೈಂಟ್ಸ್‌ ತಂಡವು ನೂತನ ಜೆರ್ಸಿ ಅನಾವರಣ ಮಾಡಿದ್ದಾರೆ.
ಈ ಮೂಲಕ ಈ ಬಾರಿ ಕೆ ಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ ತಂಡವು ಕಡು ನೀಲಿ ಬಣ್ಣದ ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ.

ಕಳೆದ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್‌ ತಂಡವು ತಿಳಿ ನೀಲಿ ಮಿಶ್ರಿತ ಜೆರ್ಸಿಯಲ್ಲಿ ಕಣಕ್ಕಿಳಿದಿತ್ತು. ತಾನಾಡಿದ ಚೊಚ್ಚಲ ಆವೃತ್ತಿಯ ಐಪಿಎಲ್‌ನಲ್ಲೇ ಲಖನೌ ಸೂಪರ್ ಜೈಂಟ್ಸ್ ತಂಡವು ಪ್ಲೇ ಆಫ್ ಹಂತವನ್ನು ಪ್ರವೇಶಿಸಿತ್ತಾದರೂ, ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಎದುರು ಮುಗ್ಗರಿಸುವ ಮೂಲಕ ನಿರಾಸೆ ಅನುಭವಿಸಿತ್ತು.

ಲಖನೌ ಸೂಪರ್ ಜೈಂಟ್ಸ್ ತಂಡದ ಜೆರ್ಸಿ ಅನಾವರಣ ಕಾರ್ಯಕ್ರಮದಲ್ಲಿ ರವಿ ಬಿಷ್ಣೋಯಿ, ಆವೇಶ್ ಖಾನ್, ಜಯದೇವ್ ಉನಾದ್ಕತ್, ದೀಪಕ್ ಹೂಡಾ ಹಾಗೂ ನಾಯಕ ಕೆ ಎಲ್ ರಾಹುಲ್ ಅವರು ಹಾಜರಿದ್ದರು. ಇನ್ನುಳಿದಂತೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಲಖನೌ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ, ಹಾಗೂ ಟೀಂ ಮೆಂಟರ್ ಗೌತಮ್ ಗಂಭೀರ್ ಕೂಡಾ ಉಪಸ್ಥಿತರಿದ್ದರು

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!