ಮಹಿಳಾ ಮೀಸಲಾತಿ ಮಸೂದೆ ಮಂಡಿಸಿ: ಸರ್ವಪಕ್ಷಗಳ ಸಭೆಯಲ್ಲಿ ಒಮ್ಮತದ ಮನವಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಾಳೆಯಿಂದ ಐದು ದಿನಗಳ ಸಂಸತ್ ವಿಶೇಷ ಅಧಿವೇಶನ ಆರಂಭಗೊಳ್ಳಲಿದ್ದು, ಈ ಹಿನ್ನೆಲೆ ಇಂದು ನಡೆದ ಸರ್ವಪಕ್ಷಗಳ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿ ಅಂಗೀಕರಿಸುವಂತೆ ಆಡಳಿತ ಮತ್ತು ವಿರೋಧ ಪಕ್ಷಗಳು ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳು ಆಗ್ರಹಿಸಿವೆ.

ಕೇಂದ್ರ ಸರ್ಕಾರ ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಹಲವು ನಾಯಕರು, ಬಹುಕಾಲದಿಂದ ಬಾಕಿ ಉಳಿದಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಬೇಕು ಎಂದು ಹೇಳಿದ್ದು, ಒಮ್ಮತದಿಂದ ಅಂಗೀಕಾರವಾಗಬಹುದೆಂದು ಆಶಿಸಿದ್ದಾರೆ.

ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕರಿಸಲು ಎಲ್ಲಾ ವಿರೋಧ ಪಕ್ಷಗಳು ಒತ್ತಾಯಿಸಿವೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷದ ಮಿತ್ರ ಪಕ್ಷ ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಅವರುಈ ಬಾರಿಯ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕರಿಸುವಂತೆ ನಾವು ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದರೆ ಒಮ್ಮತದಿಂದ ಅಂಗೀಕಾರವಾಗುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!