ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್ ಸರಕಾರ ಸೋಮವಾರ ಎಪಿಎಂಸಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿ ಅನುಮೋದನೆ ಪಡೆದುಕೊಂಡಿ ದ್ದು ಇಂದು ವಿಧಾನಸಭೆಯಲ್ಲಿ ಹಲವು ತಿದ್ದುಪಡಿ ವಿಧೇಯಕಗಳನ್ನು ಮಂಡಿಸಿದೆ .
ಇಂದು ಕಲಾಪದಲ್ಲಿ ರಾಜ್ಯ ಸರ್ಕಾರದಿಂದ ಸಿವಿಲ್ ಪ್ರಕ್ರಿಯಾ ಸಂಹಿತೆ ತಿದ್ದುಪಡಿ ವಿಧೇಯಕ, ಭೂ ಕಂದಾಯ ತಿದ್ದುಪಡಿ ವಿಧೇಯಕ, ನೋಂದಣಿ ಕರ್ನಾಟಕ ತಿದ್ದುಪಡಿ ವಿಧೇಯಕ, ಸರ್ಕಾರಿ ವ್ಯಾಜ್ಯ ನಿರ್ವಹಮಾ ವಿಧೇಯಕವನ್ನು ಮಂಡಿಸಲಾಯಿತು.
ಜೊತೆಗೆ ಸರಕು ಮತ್ತು ಸೇವೆಗಳ ತಿದ್ದುಪಡಿ ವಿಧೇಯಕಕ್ಕೂ ಇಂದು ಅನಮೋದನೆಯನ್ನು ಪಡೆಯಿತು.
ಇದೀಗ ಇಂದು ವಿಧಾನಸಭೆಯಲ್ಲಿ ಮಂಡಿಸಲಾಗಿರುವ ಹಲವು ತಿದ್ದಪಡಿ ವಿಧೇಯಕಗಳ ಬಗ್ಗೆ ನಾಳೆ ಸದನದ ಸದಸ್ಯರಿಂದ ಚರ್ಚೆ ನಡೆಸಿ, ಅಂತಿಮವಾಗಿ ಅನುಮೋದನೆಯನ್ನು ಪಡೆಯುವ ನಿರೀಕ್ಷೆಯಲ್ಲಿ ರಾಜ್ಯ ಸರ್ಕಾರವಿದೆ.