Saturday, October 1, 2022

Latest Posts

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೈಸೂರು ದಸರಾ ಉದ್ಘಾಟನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪ್ರಸಕ್ತ ಸಾಲಿನ ಮೈಸೂರು ದಸರಾ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಶನಿವಾರ ಸುದ್ಧಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಅವರು, ಮೈಸೂರು ದಸರಾ ಮಹೋತ್ಸವವನ್ನು ಯಾರು ಉದ್ಘಾಟಿಸಬೇಕು ಎಂಬುದಾಗಿ ಚರ್ಚಿಸಲಾಗಿತ್ತು. ಆ ಚರ್ಚೆಯಂತೆ ಈ ಬಾರಿ ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಉದ್ಘಾಟಿಸಲು ಆಹ್ವಾನಿಸಲು ನಿರ್ಧರಿಸಲಾಗಿದೆ. ಹೀಗಾಗಿ ಈ ಬಾರಿಯ ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂದರು.
ಇನ್ನೂ ಸೆಪ್ಟೆಂಬರ್ 26ರಿಂದ ನವರಾತ್ರಿ ಉತ್ಸವ ಆರಂಭಗೊಳ್ಳಲಿದೆ. ಅಕ್ಟೋಬರ್ 5ರಂದು ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!