ರಾಷ್ಟ್ರಪತಿಗಳಿಂದ ಪಿವಿಎನ್, ಠಾಕೂರ್, ಸಹಿತ ಗಣ್ಯರಿಗೆ ದೇಶದ ಅತ್ಯುನ್ನತ ‘ಭಾರತ ರತ್ನ’ ಪ್ರದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಪ್ರಧಾನಿಗಳಾದ ಪಿ.ವಿ. ನರಸಿಂಹರಾವ್, ಚೌಧರಿ ಚರಣ್ ಸಿಂಗ್, ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ ಹಾಗೂ ಬಿಹಾರ ಮಾಜಿ ಮುಖ್ಯಮಂತ್ರಿಗಳಾಗಿದ್ದ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಪ್ರದಾನ ಮಾಡಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಈ ಗಣ್ಯರ ಕುಟುಂಬ ವರ್ಗದವರಿಗೆ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನಿಸಲಾಯಿತು.
ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರ ಪುತ್ರ ಪಿ.ವಿ. ಪ್ರಭಾಕರ್ ರಾವ್, ಚೌಧರಿ ಸಿಂಗ್ ಅವರ ಮೊಮ್ಮಗ, ರಾಷ್ಟ್ರೀಯ ಲೋಕದಳ ಅಧ್ಯಕ್ಷ ಜಯಂತ್ ಚೌಧರಿ, ಸ್ವಾಮಿನಾಥನ್ ಅವರ ಪುತ್ರಿ ನಿತ್ಯಾ ರಾವ್, ಕರ್ಪೂರಿ ಠಾಕೂರ್ ಅವರ ಪುತ್ರ ರಾಮ್‌ನಾಥ್ ಠಾಕೂರ್ ರಾಷ್ಟ್ರಪತಿಗಳಿಂದ ಈ ಗೌರವ ಪ್ರಶಸ್ತಿಯನ್ನು ಸ್ವೀಕರಿಸಿದರು.

ಇನ್ನೋರ್ವ ‘ಭಾರತ ರತ್ನ’ ಗೌರವ ಪುರಸ್ಕೃತರಾದ ಹಿರಿಯ ರಾಜಕೀಯ ಮುತ್ಸದ್ದಿ ಎಲ್.ಕೆ. ಆಡ್ವಾಣಿ ಅವರು ಅನಾರೋಗ್ಯದ ಕಾರಣ ಇಂದಿನ ಸಮಾರಂಭಕ್ಕೆ ಗೈರಾಗಿದ್ದು ಭಾನುವಾರ ಅವರ ನಿವಾಸದಲ್ಲಿ ಪ್ರಶಸ್ತಿ ಪ್ರದಾನ ಮಾಡುವ ಸಾಧ್ಯತೆಯಿದೆ. ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ, ಇತರ ಗಣ್ಯರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!