Friday, June 9, 2023

Latest Posts

ರಾಷ್ಟ್ರಪತಿ ದ್ರೌಪದಿ ಮುರ್ಮು ಪಶ್ಚಿಮ ಬಂಗಾಳಕ್ಕೆ ಭೇಟಿ : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಅವರ ಎರಡು ದಿನಗಳ ಭೇಟಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಗೌರವ ಸಲ್ಲಿಸಲು ರಾಷ್ಟ್ರಪತಿಗಳು ಕೋಲ್ಕತ್ತಾದ ನೇತಾಜಿ ಭವನಕ್ಕೆ ಭೇಟಿ ನೀಡಲಿದ್ದಾರೆ. ಗುರುದೇವ್ ರವೀಂದ್ರನಾಥ ಟ್ಯಾಗೋರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಜೋರಾಸಂಕೋ ಠಾಕುರ್ಬರಿ – ರವೀಂದ್ರನಾಥ ಟ್ಯಾಗೋರ್ ಅವರ ಮನೆಗೆ ಭೇಟಿ ಮಾಡಲಿದ್ದಾರೆ.

ಸಂಜೆ ಕೋಲ್ಕತ್ತಾದ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಅವರ ಗೌರವಾರ್ಥವಾಗಿ ಆಯೋಜಿಸಲಾಗಿರುವ ನಾಗರಿಕ ಸ್ವಾಗತ ಸಮಾರಂಭದಲ್ಲಿ ರಾಷ್ಟ್ರಪತಿಗಳು ಭಾಗವಹಿಸಲಿದ್ದಾರೆ.

ನಾಳೆ ರಾಷ್ಟ್ರಪತಿಗಳು ಬೇಲೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ಕೋಲ್ಕತ್ತಾದಲ್ಲಿ ಯುಕೋ ಬ್ಯಾಂಕ್‌ನ 80 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆಯಲ್ಲಿ ಅವರು ಭಾಗಿಯಾಗಲಿದ್ದಾರೆ. ನಂತರ ರಾಷ್ಟ್ರಪತಿಗಳು ಶಾಂತಿನಿಕೇತನಕ್ಕೆ ಭೇಟಿ ನೀಡಲಿದ್ದು, ಅಲ್ಲಿ ವಿಶ್ವಭಾರತಿಯ ವಾರ್ಷಿಕ ಘಟಿಕೋತ್ಸವದಲ್ಲಿ ಹಾಜರಾಗಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!