ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ‘ಕಾನ್ಸ್‌ಟಂಟೈನ್ ದಿ ಫಿಲಾಸಫರ್ ವಿಶ್ವವಿದ್ಯಾಲಯ’ ಗೌರವ ಡಾಕ್ಟರೇಟ್ ನೀಡಿ ಪುರಸ್ಕರಿಸಿದೆ.
ನಾಲ್ಕು ದಿನಗಳ ಸ್ಲೋವಾಕಿಯಾ ಮತ್ತು ಪೋರ್ಚುಗಲ್ ಭೇಟಿಗೆ ತೆರಳಿರುವ ರಾಷ್ಟ್ರಪತಿ ಮುರ್ಮು ಅವರು ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಬಂದು ಗೌರವವನ್ನು ಸ್ವೀಕರಿಸಿದ್ದಾರೆ. ಸಾರ್ವಜನಿಕ ಸೇವೆಯಲ್ಲಿ ಗಮನಾರ್ಹ ಪಾತ್ರ ವಹಿಸಿದ್ದನ್ನು ಪರಿಗಣಿಸಿ ವಿಶ್ವವಿದ್ಯಾಲಯವು ಈ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಿದೆ.
ಶಿಕ್ಷಣ, ಮಹಿಳಾ ಸಬಲೀಕರಣ, ಸಾಂಸ್ಕೃತಿಕ ಮತ್ತು ಭಾಷಾ ವೈವಿಧ್ಯತೆಯ ಸಂರಕ್ಷಣೆ ಮತ್ತು ಉತ್ತೇಜನಕ್ಕೆ ನೀಡಿದ ಕೊಡುಗೆಗಾಗಿ ಅವರನ್ನು ಗೌರವಿಸಲಾಗಿದೆ ಎಂದು ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ಹೇಳಿದೆ.