ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಹೈದರಾಬಾದ್‌ಗೆ ಬರಲಿದ್ದಾರೆ. ಅಲ್ಲೂರಿ ಸೀತಾರಾಮರಾಜು 125ನೇ ಜನ್ಮದಿನಾಚರಣೆಯ ಅಂಗವಾಗಿ ಏರ್ಪಡಿಸಿರುವ ಸಮಾರಂಭ ಮಂಗಳವಾರ ಗಚ್ಚಿಬೌಲಿಯ ಜಿಎಂಸಿ ಬಾಲಯೋಗಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಷ್ಟ್ರಪತಿಗಳು ನಗರಕ್ಕೆ ಬರುತ್ತಿದ್ದಾರೆ.
ಮಂಗಳವಾರ ಬೆಳಗ್ಗೆ 10 ಗಂಟೆಗೆ ಹಕೀಂಪೇಟ್ ಏರ್ ಫೋರ್ಸ್ ಟ್ರೈನಿಂಗ್ ಸೆಂಟರ್ ಬರಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ಬೊಳ್ಳಾರ್‌ನಲ್ಲಿರುವ ರಾಷ್ಟ್ರಪತಿ ನಿವಾಸಕ್ಕೆ ತೆರಳಲಿದ್ದಾರೆ. ಸಂಜೆ 5 ಗಂಟೆಗೆ ರಾಷ್ಟ್ರಪತಿ ಹೆಲಿಕಾಪ್ಟರ್ ಮೂಲಕ ಗಚ್ಚಿಬೌಲಿ ಕ್ರೀಡಾಂಗಣಕ್ಕೆ ಆಗಮಿಸುವರು.ಅಲ್ಲಿ ರಾಷ್ಟ್ರಪತಿಗಳು ಒಳಾಂಗಣ ಕ್ರೀಡಾಂಗಣದಲ್ಲಿ ಅಲ್ಲೂರಿ ಸೀತಾರಾಮರಾಜರ 125ನೇ ಜನ್ಮದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು.
ದ್ರೌಪದಿ ಮುರ್ಮು ನಗರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಸೈಬರಾಬಾದ್‌ನಲ್ಲಿ ಸಂಚಾರ ನಿರ್ಬಂಧ ಹೇರಲಾಗಿದ್ದು, ಗಚ್ಚಿಬೌಲಿಯಿಂದ ಲಿಂಗಂಪಲ್ಲಿವರೆಗೆ ಸಂಚಾರ ನಿರ್ಬಂಧಗಳನ್ನು ಜಾರಿಗೊಳಿಸಲಾಗುವುದು. ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ ನಿರ್ಬಂಧಗಳು ಜಾರಿಯಲ್ಲಿರುತ್ತವೆ. ವಾಹನ ಸವಾರರು ಪರ್ಯಾಯ ಮಾರ್ಗದಲ್ಲಿ ತೆರಳುವಂತೆ ಪೊಲೀಸರು ತಿಳಿಸಿದ್ದಾರೆ.