ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಚಾಮುಂಡಿ ಬೆಟ್ಟ: ಮೈಸೂರು ದಸರಾಗೆ ರಾಷ್ಟ್ರಪತಿ ವಿದ್ಯುಕ್ತ ಚಾಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕದ ಇತಿಹಾಸದಲ್ಲಿಯೇ ಸುವರ್ಣಾಕ್ಷರಗಳಲ್ಲಿ ದಾಖಲಾಗುವ ಕ್ಷಣವೊಂದಕ್ಕೆ ಚಾಮುಂಡಿ ಬೆಟ್ಟ ಸಾಕ್ಷಿಯಾಗಿದೆ. ಐತಿಹಾಸಿಕ ನಾಡಹಬ್ಬ ದಸರಾಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದರು. ನಾಡ ಅಧಿದೇವತೆ ಚಾಮುಂಡಿ ತಾಯಿಯ ಸಮಕ್ಷಮದಲ್ಲಿ ದೀಪ ಬೆಳಗಿಸುವ ಮೂಲಕ ಈ ವರ್ಷದ ಮೈಸೂರು ದಸರಾಕ್ಕೆ ದ್ರೌಪದಿ ಮುರ್ಮು ಅವರು ವಿದ್ಯುಕ್ತ ಚಾಲನೆ ನೀಡಿದರು.

ರಾಷ್ಟ್ರಪತಿಯಾಗಿ ಅಧಿಕಾರವಹಿಸಿಕೊಂಡ ಬಳಿಕ ಅವರು ಇದೇ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿ, ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಅಮ್ಮನವರ ದರ್ಶನ ಪಡೆದರು. ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಸಚಿವರಾದ ಸುನೀಲ್‌ ಕುಮಾರ್‌, ಎಸ್‌.ಟಿ.ಸೋಮಸೇಖರ್‌, ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!