ಇಂದು 75 ಶಿಕ್ಷಕರಿಗೆ ರಾಷ್ಟ್ರಪತಿಯವರಿಂದ ʼರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ’ ಪ್ರದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶಿಕ್ಷಕರ ದಿನದ ಅಂಗವಾಗಿ ಇಂದು 75 ಶಿಕ್ಷಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ʼರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ’ ಪ್ರದಾನ ಮಾಡಲಿದ್ದಾರೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಶಿಕ್ಷಣ ಸಚಿವಾಲಯವು ಜಂಟಿಯಾಗಿ ಆಯೋಜಿಸಿರುವ ಸಮಾರಂಭದಲ್ಲಿ ರಾಷ್ಟ್ರಪತಿ ಮುರ್ಮು ಅವರು ಪ್ರಶಸ್ತಿ ನೀಡಲಿದ್ದಾರೆ.

ದೇಶದ ವಿವಿಧ ಭಾಗಗಳಿಂದ ಆಯ್ಕೆಯಾಗಿರುವ ಒಟ್ಟು 75 ಪ್ರಶಸ್ತಿ ಪುರಸ್ಕೃತರಲ್ಲಿ 50 ಶಾಲಾ ಶಿಕ್ಷಕರು, ಉನ್ನತ ಶಿಕ್ಷಣ ಸಂಸ್ಥೆಯ 13 ಶಿಕ್ಷಕರು ಹಾಗೂ ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವಾಲಯದ 12 ಶಿಕ್ಷಕರು ಸೇರಿದ್ದಾರೆ.

ಪ್ರಶಸ್ತಿಗೆ ಆಯ್ಕೆಯಾದವರಲ್ಲಿ ಐವರು ಗುಜರಾತ್‌ನವರು, ಕರ್ನಾಟಕ ಹಾಗೂ ಮಹಾರಾಷ್ಟ್ರದಿಂದ ತಲಾ ನಾಲ್ವರು ಶಿಕ್ಷಕರಿದ್ದಾರೆ. ಉತ್ತರಪ್ರದೇಶದಿಂದ ಮೂವರು, ಪಶ್ಚಿಮ ಬಂಗಾಳ, ಬಿಹಾರ, ತಮಿಳುನಾಡು, ಆಂಧ್ರಪ್ರದೇಶದಿಂದಲೂ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪುರಸ್ಕೃತರಿಗೆ ತಲಾ ₹ 50 ಸಾವಿರ ನಗದು, ಪ್ರಮಾಣಪತ್ರ ಹಾಗೂ ಬೆಳ್ಳಿ ಪದಕವನ್ನು ನೀಡಲಾಗುವುದು. ಅದಾಗ್ಯೂ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಂವಾದ ನಡೆಸುವ ಅವಕಾಶವೂ ದೊರೆಯಲಿದೆ ಎಂದು ಸಚಿವಾಲಯವು ತಿಳಿಸಿದೆ.

ಈ ವರ್ಷದಿಂದ ಉನ್ನತ ಶಿಕ್ಷಣ ಇಲಾಖೆ ಮತ್ತು ಕೌಶಲ ಅಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವಾಲಯದ ಶಿಕ್ಷಕರನ್ನು ಸೇರಿಸಿ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯ ವ್ಯಾಪ್ತಿಯನ್ನು ವಿಸ್ತರಿಸಲಾಗಿದೆ ಎಂದು ಶಿಕ್ಷಣ ಸಚಿವಾಲಯ ಹೇಳಿದೆ.

ಕರ್ನಾಟಕದ ಆರು ಶಿಕ್ಷಕರಿಗೆ ರಾಷ್ಟ್ರಪ್ರಶಸ್ತಿ

ರಾಜ್ಯದ ನಾರಾಯಣ ಪರಮೇಶ್ವರ ಭಾಗವತ್, ಸಪ್ನಾ ಶ್ರೀಶೈಲ ಅನಿಗೋಳ, ಎಸ್.ಆರ್. ಮಹಾದೇವ ಪ್ರಸನ್ನ, ಪೂಜಾ ಆರ್‌ ಸಿಂಗ್‌, ದಿವ್ಯ .ಎಲ್‌ ಮತ್ತು ದಿನೇಶ್ ಬಾಬು .ಜೆ ಅವರು ಈ ಬಾರಿ ಶಿಕ್ಷಕರ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!