ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗಳ ಸಪ್ತಾಹ ಉದ್ಘಾಟಿಸಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪಂಚಾಯತ್ ರಾಜ್ ಸಚಿವಾಲಯವು ನವದೆಹಲಿಯಲ್ಲಿ ಏಪ್ರಿಲ್ 17 ರಿಂದ ಏಪ್ರಿಲ್‌ 21ರ ವರೆಗೆ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗಳ ಸಪ್ತಾಹವನ್ನು ಆಯೋಜಿಸಿದ್ದು, ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಮತ್ತು ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ರಾಷ್ಟ್ರಪತಿಗಳು ದೇಶಾದ್ಯಂತದ ಒಂದು ಸಾವಿರದ ಐನೂರಕ್ಕೂ ಹೆಚ್ಚು ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಏಪ್ರಿಲ್ 24ರಂದು ನಿಗದಿಪಡಿಸಲಾದ ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಪೂರ್ವಭಾವಿಯಾಗಿ ಆಜಾದಿ ಕಾ ಅಮೃತ್ ಮಹೋತ್ಸವ 2.0 ರ ಭಾಗವಾಗಿ ಪಂಚಾಯತ್ ರಾಜ್ ಸಚಿವಾಲಯವು ಇಂದಿನಿಂದ 21ರ ವರೆಗೆ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗಳ ವಾರವನ್ನು ಆಚರಿಸಲಿದೆ.

ಈ ಸಂದರ್ಭವನ್ನು ಆಚರಿಸಲು ಸಚಿವಾಲಯವು “ಪಂಚಾಯತೊನ್ ಕೆ ಸಂಕಲ್ಪೋನ್ ಕಿ ಸಿದ್ಧಿ ಕಾ ಉತ್ಸವ್” ಎಂಬ ವಿಷಯದ ಆಧಾರದ ಮೇಲೆ ವಿಷಯಾಧಾರಿತ ಸಮ್ಮೇಳನಗಳ ಸರಣಿಯನ್ನು ಆಯೋಜಿಸಿದೆ.

ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್, ಕೇಂದ್ರ ಪಂಚಾಯತ್ ರಾಜ್ ರಾಜ್ಯ ಸಚಿವ ಕಪಿಲ್ ಮೊರೇಶ್ವರ್ ಪಾಟೀಲ್ ಮತ್ತು ಕೇಂದ್ರ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಫಗ್ಗನ್ ಸಿಂಗ್ ಕುಲಾಸ್ತೆ ಅವರು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!