ರಾಣಿ ಚೆನ್ನಭೈರಾದೇವಿ ಅಂಚೆ ಚೀಟಿ ಅನಾವರಣಗೊಳಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

“ಮೆಣಸಿನ ರಾಣಿ” ಎಂದೇ ಪ್ರಸಿದ್ಧಳಾದ ರಾಣಿ ಚೆನ್ನಭೈರಾದೇವಿ ಸ್ಮರಣಾರ್ಥವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಚೆ ಚೀಟಿ ಬಿಡುಗಡೆ ಮಾಡಿದರು.

ರಾಷ್ಟ್ರಪತಿ ಭವನದಲ್ಲಿ ರಾಣಿ ಚೆನ್ನಭೈರಾದೇವಿ ಅಂಚೆ ಚೀಟಿ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಮತ್ತು ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಿ, ರಾಣಿ ಚೆನ್ನಭೈರಾದೇವಿಯ ಧೈರ್ಯ, ಸ್ಥೈರ್ಯ ಮತ್ತು ಸಾಧನೆಯನ್ನು ನಾವು ಸುವರ್ಣಾಕ್ಷರಗಳಲ್ಲಿ ಮಾತ್ರವಲ್ಲ, ವಜ್ರದ ಅಕ್ಷರಗಳಲ್ಲಿ ಕೆತ್ತಬೇಕು. ಇದೊಂದು ಅವಿಸ್ಮರಣೀಯ ಘಟನೆ. ನಿಜವೇ ಎಂದು ಮೈ ಚಿವುಟಿ ನೋಡಿಕೊಳ್ಳಬೇಕಾದ ಸಂಗತಿ. ಏಕೆಂದರೆ ನನ್ನಂಥವರಿಗೆ ರಾಷ್ಟ್ರಪತಿ ಭವನವನ್ನು ಪ್ರವೇಶಿಸುವ ಅವಕಾಶವೇ ದೊಡ್ಡದು. ಇನ್ನು ಅವರನ್ನು ಸಮೀಪದಲ್ಲಿ ಕಾಣುವ ಭಾಗ್ಯ ಮತ್ತಷ್ಟು ಹಿರಿದಾದುದು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!