Saturday, December 9, 2023

Latest Posts

ಇಂದು ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ರಾಜಧಾನಿ ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಲಿದ್ದಾರೆ.

ಇಂದು ಐಐಎಂ ಬೆಂಗಳೂರಿನ ಸ್ಥಾಪನಾ ಸುವರ್ಣ ಮಹೋತ್ಸವ ಸಪ್ತಾಹ ಆಚರಣೆಗೆ ಚಾಲನೆ ನೀಡಲಿದ್ದಾರೆ. ನಂತರ ಐಐಎಂಬಿ ಕ್ಯಾಂಪಸ್ ಕುರಿತ ಪುಸ್ತಕ ಬಿಡುಗಡೆ ಮಾಡಲಿದ್ದು, ಸಾಕ್ಷ್ಯಚಿತ್ರ ಪ್ರದರ್ಶನ ವೀಕ್ಷಿಸಲಿದ್ದಾರೆ.

ಇಂದು ಮಧ್ಯಾಹ್ನ 3:20 ಕ್ಕೆ ದೆಹಲಿಯಿಂದ ಬೆಂಗಳೂರಿಗೆ ರಾಷ್ಟ್ರಪತಿಗಳು ಆಗಮಿಸಲಿದ್ದು, ಸಂಜೆ 4 ಗಂಟೆಗೆ ಐಐಎಂ ಸಂಸ್ಥಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಂತರ ಸಂಜೆ 6 ಗಂಟೆಗೆ ಬೆಂಗಳೂರಿನಿಂದ ಚೆನ್ನೈಗೆ ತೆರಳಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!